ವಿಜಯಪುರ;- ಸಚಿವ ಎಂ.ಬಿ.ಪಾಟೀಲ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ವಿಜಯಪುರ ಉತ್ಪಾದನೆ ವಲಯ ಆಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವಿಜಯಪುರದಲ್ಲಿ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸೌಕರ್ಯಗಳನ್ನು ಕಲ್ಪಿಸಲು ಹಲವಾರು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ.
ನೈಟ್ ಲ್ಯಾಂಡಿಂಗ್ ಸೌಲಭ್ಯ ವಿಸ್ತರಿಸುವ ಮೂಲಕ ಬೋಯಿಂಗ್ ಮಾದರಿಯ ವಿಮಾನಗಳು ಇಲ್ಲಿ ಇಳಿಯುವ ನಿಟ್ಟಿನಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ನಾಲ್ಕೈದು ತಿಂಗಳಲ್ಲಿಯೇ ವಿಜಯಪುರ ವಿಮಾನ ನಿಲ್ದಾಣ ಆರಂಭಗೊಳ್ಳಲಿದೆ ಎಂದು ಹೇಳಿದರು.
ಈ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡರೆ ಮಹಾರಾಷ್ಟ್ರ, ಗೋವಾ, ತೆಲಂಗಾಣ, ನವದೆಹಲಿ, ಗುಜರಾತ್ ಮೊದಲಾದ ರಾಜ್ಯಗಳೊಂದಿಗೆ ಔದ್ಯಮಿಕ, ಶೈಕ್ಷಣಿಕ, ಆರ್ಥಿಕ ಒಡನಾಟಗಳು ತೀವ್ರಗೊಳ್ಳಲಿವೆ. ದ್ರಾಕ್ಷಿ ಮೊದಲಾದ ಬೆಳೆಗಳ ರಫ್ತು ಚಟುವಟಿಕೆಗಳಿಗೆ ವಿಜಯಪುರ ವಿಮಾನ ನಿಲ್ದಾಣ ಹೆಬ್ಬಾಗಿಲು ಆಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.