Steve Smith: ಏಕದಿನ ಕ್ರಿಕೆಟ್‌ʼನಿಂದ ಸ್ಟೀವ್ ಸ್ಮಿತ್ ನಿವೃತ್ತಿ!

0
Spread the love

ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿದ ಟೀಂ ಇಂಡಿಯಾ ಅಜೇಯ ತಂಡವಾಗಿ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಆಸೀಸ್‌ ಸ್ಟಾರ್‌ ಬ್ಯಾಟರ್‌ ಸ್ಟೀವ್‌ ಸ್ಮಿತ್‌ ನಿವೃತ್ತಿ ಘೋಷಣೆ ಮಾಡಿದ್ದಾರೆ.

Advertisement

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಸ್ಮಿತ್ ಕೇವಲ ಬ್ಯಾಟರ್ ಆಗಿ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಗಾಯದ ಕಾರಣ ಟೂರ್ನಿಗೆ ಅಲಭ್ಯರಾದ ಹಿನ್ನಲೆ ಸ್ಮಿತ್ ಅವರಿಗೆ ನಾಯಕತ್ವ ನೀಡಲಾಗಿತ್ತು. ಅದರಂತೆ ಸೆಮಿಫೈನಲ್​ವರೆಗೆ ಯಶಸ್ವಿಯಾಗಿ ತಂಡವನ್ನು ಮುನ್ನಡೆಸಿದ್ದ ಸ್ಮಿತ್ ಇದೀಗ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

ಆಸ್ಟ್ರೇಲಿಯಾ ಪರ 169 ಏಕದಿನ ಪಂದ್ಯಗಳನ್ನಾಡಿರುವ ಸ್ಟೀವ್ ಸ್ಮಿತ್ 153 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಶತಕ ಹಾಗೂ 34 ಅರ್ಧಶತಕಗಳೊಂದಿಗೆ ಒಟ್ಟು 5727 ರನ್ ಕಲೆಹಾಕಿದ್ದಾರೆ. ಇನ್ನು ಸ್ಮಿತ್ ಅವರನ್ನು ಕಳೆದ ಟಿ20 ವಿಶ್ವಕಪ್ ವೇಳೆ ಆಯ್ಕೆಗೆ ಪರಿಗಣಿಸಲಾಗಿಲ್ಲ. ಇದಾಗ್ಯೂ ಅವರು ಟಿ20 ಮತ್ತು ಟೆಸ್ಟ್ ತಂಡಗಳಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ದಿನಗಳಲ್ಲಿ ಸ್ಮಿತ್ ಆಸ್ಟ್ರೇಲಿಯಾ ಟೆಸ್ಟ್ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

 


Spread the love

LEAVE A REPLY

Please enter your comment!
Please enter your name here