ಶ್ರೀನಗರ:- ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ದಿಢೀರ್ ಶ್ರೀನಗರದ ಆಸ್ಪತ್ರೆಗೆ ದಾಖಲಾಗಿದ್ದಾರೆ.
87 ವರ್ಷದ ಫಾರೂಕ್ ಅಬ್ದುಲ್ಲಾ ಅವರಿಗೆ ಈ ವಾರದ ಆರಂಭದಲ್ಲಿ ಹೊಟ್ಟೆಯ ಸೋಂಕು ಕಾಣಿಸಿಕೊಂಡ ನಂತರ ಇಂದು ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ 2 ಬಾರಿ ಮುಖ್ಯಮಂತ್ರಿಯಾಗಿದ್ದ ಫಾರೂಕ್ ಅಬ್ದುಲ್ಲಾ ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರು ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.
“ಫಾರೂಕ್ ಅಬ್ದುಲ್ಲಾ ಕಳೆದ ಕೆಲವು ದಿನಗಳಿಂದ ಆರೋಗ್ಯವಾಗಿರಲಿಲ್ಲ. ಈಗ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ನಾಳೆ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.



