Home Karnataka News Mangalore: ಕಾಟಿಪಳ್ಳ ಬಳಿಯ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ!

Mangalore: ಕಾಟಿಪಳ್ಳ ಬಳಿಯ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ!

0
Mangalore: ಕಾಟಿಪಳ್ಳ ಬಳಿಯ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ!
Spread the love

ಮಂಗಳೂರು:- ಬದ್ರಿಯಾ ಮಸೀದಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆದಿರುವ ಘಟನೆ ಮಂಗಳೂರಿನ ಕಾಟಿಪಳ್ಳ ಬಳಿ ಜರುಗಿದೆ.

ಘಟನೆಯಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.

ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್​​ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದ ಮಸೀದಿಗೆ ಸದ್ಯ ಬಿಗಿ ಪೊಲೀಸ್​​​ ಬಂದೋಬಸ್ತ್​​​​​​​ ಕಲ್ಪಿಸಲಾಗಿದೆ.

ಪ್ರಚೋದನಕಾರಿ ಹೇಳಿಕೆ ನೀಡಿದ ವಿಚಾರವಾಗಿ ವಿಎಚ್​​ಪಿ ಹಾಗೂ ಬಜರಂಗದಳ ಮುಖಂಡರಾದ ಶರಣ್ ಪಂಪ್​ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ಹರಿಬಿಟ್ಟಿದ್ದ ಪುನಿತ್ ಅತ್ತಾವರ ವಿರುದ್ಧ ಮಂಗಳೂರಿನ‌ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿರುವ ಮಂಗಳೂರು ಪೊಲೀಸರು, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಈಗಾಗಲೇ ಎಚ್ಚರಿಕೆಯನ್ನೂ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here