ಬೆಂಗಳೂರು:- ದೇವಿಯ ತೇರು ಎಳೆಯುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆದಿರುವ ಘಟನೆ ರಾಜಧಾನಿ ಬೆಂಗಳೂರಿನ ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಜರುಗಿದೆ.
ಘಟನೆಯಲ್ಲಿ ಮಗು, ಯುವತಿ, ವಯಸ್ಕ ಮಹಿಳೆ ಸೇರಿ ಮೂವರಿಗೆ ಕಲ್ಲು ಬಿದ್ದಿರುವ ಆರೋಪ ಕೇಳಿಬಂದಿದೆ. ಕಲ್ಲು ಎಸೆದು ಕಿಡಿಗೇಡಿಗಳು ಎಸ್ಕೇಪ್ ಆಗಿದ್ದಾರೆ.
ತೇರಿನ ಮೇಲೆ ಅನ್ಯ ಕೋಮಿನವರಿಂದ ಕಲ್ಲು ಎಸೆದ ಆರೋಪ ಹೊರಿಸಲಾಗಿದೆ. ಓಂ ಶಕ್ತಿ ಮಾಲೆ ಧರಿಸಿದ್ದ ಮಗುವಿಗೆ ಕಲ್ಲೇಟು ಬಿದ್ದಿದೆ. ಘಟನೆ ಬಳಿಕ ಓಂ ಶಕ್ತಿ ಮಾಲಾಧಾರಿಗಳು ಜೆಜೆಆರ್ ನಗರ ಠಾಣೆಯ ಮುಂದೆ ಜಮಾಯಿಸಿ ಕ್ರಮಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಕಲ್ಲು ಎಸೆದ ಕಿಡಿಗೇಡಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.



