HomeGadag Newsಕೋವಿಡ್ ಭಯ ಬಿಡಿ, ಎಚ್ಚರಿಕೆಯಿರಲಿ

ಕೋವಿಡ್ ಭಯ ಬಿಡಿ, ಎಚ್ಚರಿಕೆಯಿರಲಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕೋವಿಡ್ ಬಗ್ಗೆ ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೂ, ಕೋವಿಡ್ ಕುರಿತು ಮುಂಜಾಗೃತೆ ವಹಿಸಬೇಕು. ಜನರಲ್ಲಿ ಭಯ ಬೇಡ, ಜಾಗೃತಿ ಇರಲಿ ಎಂದು ಸಚಿವ ಡಾ. ಎಚ್.ಕೆ. ಪಾಟೀಲ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಕೋವಿಡ್ ಮುಂಜಾಗೃತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಂತೆ ಅರಿವು ಮೂಡಿಸಬೇಕು. ಪ್ರತೀ ವಾರಕ್ಕೊಮ್ಮೆ ಕೋವಿಡ್ ಹರಡುವಿಕೆ ಪರಿಸ್ಥಿತಿಯ ಪರಿಶೀಲನೆಯನ್ನು ಜಿಲ್ಲಾಡಳಿತ ನಡೆಸುತ್ತಾ ತೀವ್ರ ನಿಗಾ ಇಡಬೇಕು. ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪಾಲಕರು ಗಮನಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ರೋಗ ಲಕ್ಷಣ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಿರುವುದು ಸೂಕ್ತ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕು ಎಂದು ಎಚ್.ಕೆ. ಪಾಟೀಲ ತಿಳಿಸಿದರು.

ಕೋವಿಡ್‌ನ ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಿ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಪರಿಸ್ಥಿತಿ ಎದುರಿಸಿ. ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿರುವಂತೆ ನೋಡಿಕೊಳ್ಳಿ. ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ. ಜಿಲ್ಲಾ ಆಸ್ಪತ್ರೆಗಳೂ ಸೇರಿದಂತೆ ಎಲ್ಲ ಆಸ್ಪತ್ರೆಗಳು ಕೊವಿಡ್ ಸೋಂಕಿತರ ಆರೈಕೆಗೆ ಸರ್ವ ಸನ್ನದ್ಧವಾಗಿ ಇರುವಂತೆ ಸಚಿವರು ಸೂಚಿಸಿದರು.

ನೆರೆಯ ರಾಜ್ಯಗಳಾದ ಕೇರಳದಲ್ಲಿ-95, ತಮಿಳುನಾಡಿನಲ್ಲಿ-66, ಮಹಾರಾಷ್ಟ್ರದಲ್ಲಿ-56 ಪ್ರಕರಣಗಳು ವರದಿಯಾಗಿವೆ. ಗದಗ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ವರಿಯಾಗದಿದ್ದರೂ ಸಹ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಮಾತನಾಡಿ, ತಾಲೂಕು ಹಂತದಲ್ಲಿ ಸಭೆ ಜರುಗಿಸಿ ಕೋವಿಡ್ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಿ, ಕೊವಿಡ್ ಮಾರ್ಗಸೂಚಿ ಪಾಲನೆ ಎಲ್ಲರ ಹೊಣೆ ಎಂದರು.

ಸಭೆಯಲ್ಲಿ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೆಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಡಿಎಚ್‌ಓ ಡಾ. ಎಸ್.ಎಸ್. ನೀಲಗುಂದ ಅವರುಗಳು ಸಭೆಗೆ ಕೋವಿಡ್ ನಿಯಂತ್ರಣಕ್ಕಾಗಿ ಮಾಡಲಾದ ಸಿದ್ಧತೆ, ಅನುಸರಿಸುವ ಕ್ರಮಗಳ ಮಾಹಿತಿ ಒದಗಿಸಿದರು.

ಸಭೆಯಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ನಗರಾಭಿವೃದ್ಧಿ ಕೋಷದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಬಿ.ಸಿ. ಕರೆಗೌಡ್ರ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಜರಿದ್ದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಸಾರ್ವಜನಿಕರಲ್ಲಿ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಬೇಕು. ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಸಲಹೆ ಮಾಡಿದರು.

“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾಲಕಾಲಕ್ಕೆ ನೀಡುವ ಮಾರ್ಗಸೂಚಿಗಳ ಪಾಲನೆ ಕಡ್ಡಾಯ. ಸದ್ಯಕ್ಕೆ ಅಂತಹ ತುರ್ತು ಇಲ್ಲದಿದ್ದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಮೂಲಸೌಕರ್ಯ ಕಡ್ಡಾಯವಾಗಿ ಇರುವಂತೆ ಕ್ರಮ ಕೈಗೊಳ್ಳಬೇಕು”

– ಎಚ್.ಕೆ. ಪಾಟೀಲ.

ಜಿಲ್ಲಾ ಉಸ್ತುವಾರಿ ಸಚಿವರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!