ರ‍್ಯಾಪಿಡೋ, ಬೈಕ್​ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್: ಸೇವೆ ಸ್ಥಗಿತಕ್ಕೆ ಸಾರಿಗೆ ಸಚಿವರ ಆದೇಶ!

0
Spread the love

ಬೆಂಗಳೂರು:- ಆಟೋ, ಕ್ಯಾಬ್ ಚಾಲಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್​ ​ಕೊಟ್ಟಿದೆ. ಕರ್ನಾಟಕದಲ್ಲಿ ಕೂಡಲೇ ರ‍್ಯಾಪಿಡೋ, ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ.

Advertisement

ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್​ ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶ ನೀಡಿತ್ತು.

ಸಚಿವ ರಾಮಲಿಂಗಾ ರೆಡ್ಡಿ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದರು. ಸದ್ಯ ಹೈಕೋರ್ಟ್ ಆದೇಶ ‌ಕಾರ್ಯಾಗತಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಆರು ವಾರಗಳ ನಂತರ ಬೈಕ್ ಟ್ಯಾಕ್ಸಿ ವಿರುದ್ಧ ಸಾರಿಗೆ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here