ಊಹಾ ಪತ್ರಿಕೋದ್ಯಮ ಮೊದಲು ನಿಲ್ಲಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.

Advertisement

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಎಂದೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.

ನನ್ನ ಕಾರಿನ ಮೇಲೆ ಕಾಗೆ ಕುಳಿತ ಸಂದರ್ಭದಲ್ಲಿ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನೆಲ್‌ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ಪುತ್ತಾರಾ ಎಂದು ಯೋಚನೆ ಮಾಡಿ ಎಂದರು.

ಬ್ಲಾಕ್‌ಮೇಲ್ ಮತ್ತು ಕೀಳುಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯೂಟ್ಯೂಬ್ ಚಾನೆಲ್‌ಗಳು ಸಮಾಜಕ್ಕೆ ಶಾಪವಾಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯೂಟ್ಯೂಬ್ ಚಾನೆಲ್‌ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗೆ  ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.


Spread the love

LEAVE A REPLY

Please enter your comment!
Please enter your name here