HomeKarnataka Newsಹಳೆ ಕಥೆ ಹೇಳುವುದನ್ನು ಬಿಟ್ಟು, ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಿ: ವಿಜಯೇಂದ್ರ ಆಗ್ರಹ

ಹಳೆ ಕಥೆ ಹೇಳುವುದನ್ನು ಬಿಟ್ಟು, ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಿ: ವಿಜಯೇಂದ್ರ ಆಗ್ರಹ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಹಳೆ ಕಥೆ ಹೇಳುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರವು ಯಾವುದೇ ಆಯೋಗಗಳಿಗೆ ಕವಡೆ ಕಾಸಿನ ಕಿಮ್ಮತ್ತನ್ನೂ ನೀಡಿಲ್ಲ; ಕಾಂತರಾಜು ಆಯೋಗಕ್ಕೆ 150 ಕೋಟಿ, 160 ಕೋಟಿ ಖರ್ಚು ಮಾಡಿ, ವರದಿಯನ್ನು ಕಸದ ಬುಟ್ಟಿಗೆ ಹಾಕಿದ್ದಾಗಿದೆ.

ಈಗ 500- 600 ಕೋಟಿ ಖರ್ಚು ಮಾಡಿ ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಹೊರಟಿದ್ದಾರೆ. ನಾಗಮೋಹನ್ ದಾಸ್ ಅವರ ವಿಚಾರದಲ್ಲೂ ಅಷ್ಟೇ ಮಾಡಿದ್ದಾರೆ. ಕಾಂಗ್ರೆಸ್ಸಿನವರು ಬಿಜೆಪಿ ಹಿಂದಿನ ಸರಕಾರದ ಬಗ್ಗೆ ಅಪಪ್ರಚಾರ ಮಾಡಿ, ಅಧಿಕಾರಕ್ಕೆ ಬಂದಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಒತ್ತಾಯಿಸಿದರು.

ರಾಜ್ಯ ಸರಕಾರದಲ್ಲಿ ಗೊಂದಲ ಸೃಷ್ಟಿಯಾಗಿ ಜನರು ಅಭಿವೃದ್ಧಿ ಆಗುತ್ತಿಲ್ಲ ಎಂದು ಉಗಿಯಲು ಆರಂಭಿಸಿದಾಗ ಜಾತಿ ಗÀಣತಿಯಂಥ ಗೊಂದಲಗಳನ್ನು ಉಂಟು ಮಾಡುತ್ತಾರೆ. ಕಾಂತರಾಜು ವರದಿ ಕುರಿತು ಕ್ಯಾಬಿನೆಟ್ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿಗಳು ಎಷ್ಟು ಬಾರಿ ಹೇಳಿದ್ದಾರೆ? ಈ ಸರಕಾರಕ್ಕೆ ಗೊಂದಲ ಸೃಷ್ಟಿಸುವ ಮನಸ್ಸಿದೆ ಎಂದು ದೂರಿದರು. ಜಾತಿ ವಿಷಬೀಜ ಬಿತ್ತಿ ಹಿಂದೂ ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿದ್ದಾರೆಯೇ ವಿನಾ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳಿಗೆ ಗೊಂದಲ ಸೃಷ್ಟಿಸುವುದನ್ನು ಬಿಟ್ಟರೆ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಟೀಕಿಸಿದರು.

ಬೆಂಗಳೂರು ಮಹಾನಗರ ಮಾತ್ರವಲ್ಲದೇ ರಾಜ್ಯದ ಯಾವುದೇ ಜಿಲ್ಲೆಗಳಲ್ಲಿ ರಸ್ತೆಗಳಲ್ಲಿರುವ ಗುಂಡಿಗಳಿಗೆ ಮುಕ್ತಿ ಕೊಡುವ ಕೆಲಸವನ್ನು ಮಾಡಲು ರಾಜ್ಯ ಸರಕಾರಕ್ಕೆ ಸಾಧ್ಯವಾಗಿಲ್ಲ ಎಂದು ಆಕ್ಷೇಪಿಸಿದರು. ಅಧಿಕಾರಿಗಳು ಹೋಗಿ ಎಷ್ಟು ರಸ್ತೆ ಗುಂಡಿಗಳಿವೆ ಎಂದು ಲೆಕ್ಕ ಹಾಕಿ ಬಂದಿದ್ದಾರೋ ಗೊತ್ತಿಲ್ಲ. ಹಲವಾರು ಬಾರಿ ಡೆಡ್‍ಲೈನ್ ಕೊಟ್ಟರೂ ಇವತ್ತಿಗೂ ಗುಂಡಿಗಳನ್ನು ಮುಚ್ಚಲು ಈ ಸರಕಾರದ ಕಡೆಯಿಂದ ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಹಾಗಾಗಿ ಬಿಜೆಪಿ ನಿನ್ನೆ ರಾಜ್ಯಾದ್ಯಂತ ಒಂದು ಗಂಟೆ ರಸ್ತೆ ತಡೆ ಮಾಡಿದೆ; ಗುಂಡಿಗಳನ್ನೂ ಮುಚ್ಚಿ ರಾಜ್ಯ ಸರಕಾರಕ್ಕೆ ಈ ರಾಜ್ಯದ ಪರಿಸ್ಥಿತಿ ಬಗ್ಗೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಈಗಲಾದರೂ ರಾಜ್ಯ ಸರಕಾರ ಎಚ್ಚತ್ತುಕೊಂಡು, ಪುಗ್ಸಟ್ಟೆ ಭಾಷಣ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು. ಬೆಂಗಳೂರಿನ ಗೌರವ, ಮರ್ಯಾದೆ ತೆಗೆಯುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಅತಿ ಶೀಘ್ರವೇ ಗುಂಡಿಗಳನ್ನು ಮುಚ್ಚಿ ಬೆಂಗಳೂರಿನ ಗೌರವ ಉಳಿಸಬೇಕು ಎಂದು ಅವರು ಒತ್ತಾಯಿಸಿದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!