HomeKarnataka Newsಚಿಕ್ಕಮಗಳೂರಿನಲ್ಲಿ ಬಿರುಗಾಳಿ ಅಬ್ಬರ: ಮರಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಅಬ್ಬರ: ಮರಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತ

For Dai;y Updates Join Our whatsapp Group

Spread the love

ಚಿಕ್ಕಮಗಳೂರು: ರಾಜ್ಯದಲ್ಲಿ ಬೇಸಿಗೆ ಬಿಸಿಯ ನಡುವೆ ಹಲವು ಕಡೆಗಳಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ನಿನ್ನೆ ಸುರಿದ ಗಾಳಿ–ಮಳೆಗೆ ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ಬಿರುಗಾಳಿಯ ಹೊಡೆತಕ್ಕೆ ಬೃಹತ್ ತೆಂಗಿನಮರವೊಂದು ಅಂಗನವಾಡಿ ಶಿಕ್ಷಕಿ ಗೌರಮ್ಮ ಅವರ ಮನೆಯ ಮೇಲೆ ಉರುಳಿಬಿದ್ದಿದೆ. ಘಟನೆಯ ರಭಸಕ್ಕೆ ಮನೆಯ ಮೇಲ್ಚಾವಣಿಯ ಹೆಂಚುಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, ಕಟ್ಟಡಕ್ಕೂ ಹಾನಿ ಉಂಟಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಕುಟುಂಬಸ್ಥರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಇದೇ ವೇಳೆ ಬಣಕಲ್ ಮತ್ತು ಮತ್ತಿಕಟ್ಟಿ ಗ್ರಾಮಗಳ ನಡುವಿನ ರಸ್ತೆಯಲ್ಲಿ ವಿದ್ಯುತ್ ಕಂಬ ಅಡ್ಡಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸ್ಥಳೀಯರು ಪರದಾಡುವಂತಾಗಿದೆ. ಹಲವೆಡೆ ತೋಟಗಳ ಬೆಳೆಗಳಿಗೆ ಹಾನಿಯಾಗುವ ಆತಂಕವೂ ವ್ಯಕ್ತವಾಗಿದೆ.

ಇನ್ನು ಚಿತ್ರದುರ್ಗದ ಕೆಲವು ಭಾಗಗಳಲ್ಲಿಯೂ ಮಳೆಯ ಅಬ್ಬರದಿಂದ ಹಾನಿ ಸಂಭವಿಸಿರುವ ವರದಿಗಳು ಬಂದಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!