ಬೆಂಗಳೂರು:- ಬಿರುಗಾಳಿ ಸಹಿತ ಮಳೆ ಆಗುವ ಹಿನ್ನೆಲೆ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್, ಕಲಬುರಗಿ, ಬೆಳಗಾವಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಗುರುವಾರದಿಂದ ಮಳೆ ಶುರುವಾಗಿದೆ. ಎಚ್ಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.