HomeKarnataka Newsರಾಯಚೂರಿನಲ್ಲಿ ಬೀದಿ ನಾಯಿಗಳ ಅಟ್ಟಹಾಸ: 4 ವರ್ಷದ ಬಾಲಕನಿಗೆ ನಾಯಿ ಕಡಿತ!

ರಾಯಚೂರಿನಲ್ಲಿ ಬೀದಿ ನಾಯಿಗಳ ಅಟ್ಟಹಾಸ: 4 ವರ್ಷದ ಬಾಲಕನಿಗೆ ನಾಯಿ ಕಡಿತ!

For Dai;y Updates Join Our whatsapp Group

ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ರಾಯಚೂರು ತಾಲೂಕಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ.

ಮಲಿಯಾಬಾದ್ ಗ್ರಾಮದ ವೇಣುಗೋಪಾಲ್ ಎಂಬ ಬಾಲಕ ಬೀದಿ ನಾಯಿಗಳ ದಾಳಿಗೆ ಒಳಗಾಗಿದ್ದಾನೆ.

ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಏಕಾಏಕಿ ಬಂದ ಬೀದಿ ನಾಯಿಗಳು ಬಾಲಕನ ಮೇಲೆ ದಾಳಿ ನಡೆಸಿವೆ. ದಾಳಿಯಲ್ಲಿ ಬಾಲಕನ ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ.

ತಕ್ಷಣ ಬಾಲಕನನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೀದಿ ನಾಯಿಗಳ ಹಾವಳಿಯಿಂದ ಮಕ್ಕಳನ್ನು ಹೊರಗೆ ಬಿಡಲು ಪೋಷಕರು ಭಯಪಡುತ್ತಿದ್ದಾರೆ.

ಈ ಘಟನೆ ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img