ಗದಗ: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ಅಟ್ಯಾಕ್ ಮಾಡಿ ತಲೆ, ಮುಖ, ತುಟಿ ಕಚ್ಚಿ ಗಾಯಗಳನ್ನು ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ವಾರ್ಡ್ ನಂ 20ರ ದರ್ಗಾ ಬಳಿ ನಡೆದಿದೆ. ಬಾಲಕ ರುದ್ರೇಶ್ ಕಾಳೆ (3) ಗಾಯಗೊಂಡ ಬಾಲಕನಾಗಿದ್ದು,
Advertisement
ಬಾಲಕನ ತಲೆ, ಮುಖ, ತುಟಿ ಕಚ್ಚಿ ಗಾಯಗೊಳಿಸಿದೆ. ಈ ಬೀದಿ ನಾಯಿ ಹಾವಳಿಯಿಂದ ಜನರು ಬೇಸತ್ತು ಹೋಗಿದ್ದಾರೆ. ಕಳೆದ ಒಂದು ವಾರದಲ್ಲಿ ನಾಲ್ಕೈದು ಜನ್ರಿಗೆ ಕಚ್ಚಿ ಗಾಯಗೊಳಿಸಿದ್ದು, ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸದ್ಯ ಗಾಯಾಳು ಬಾಲಕನನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.