ಚಿಕ್ಕಮಗಳೂರು:- ತಾಲೂಕಿನ ಬನ್ನೂರು ಗ್ರಾಮದಲ್ಲಿ ಸಮೀಕ್ಷೆ ತೆರಳಿದ್ದ ಶಿಕ್ಷಕನ ಮೇಲೆ ನಾಯಿ ಗಳು ಡೆಡ್ಲಿ ಅಟ್ಯಾಕ್ ಮಾಡಿದ ಪರಿಣಾಮ ಶಿಕ್ಷಕನ ಕಾಲಿಗೆ ಗಂಭೀರ ಗಾಯಗೊಂಡ ಘಟನೆ ಜರುಗಿದೆ.
ನಾಯಿ ದಾಳಿಗೆ ಒಳಗಾದ ಶಿಕ್ಷಕನನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ನಾಯಿ ದಾಳಿಯಿಂದ ಅವರ ಕಾಲಿನ ಭಾಗಕ್ಕೆ ಭಾರೀ ಹಾನಿಯಾಗಿದೆ. ನಾಯಿಯ ಹಲ್ಲು ಸುಮಾರು ಒಂದು ಇಂಚು ಆಳಕ್ಕೆ ನಾಟಿದೆ. ಅವರಿಗೆ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸರ್ವೇ ಕಾರ್ಯದ ಭಾಗವಾಗಿ ಕೆಲ ಮನೆಗಳಲ್ಲಿನ ಯು.ಹೆಚ್.ಐ.ಡಿ. ನಂಬರ್ ಪೆಂಡಿಂಗ್ ತೋರಿಸುತ್ತಿತ್ತು. ಈ ಕಾರಣಕ್ಕೆ ಮೀಟರ್ ಬೋರ್ಡಿನಲ್ಲಿರುವ ಆರ್.ಆರ್ ನಂಬರ್ ಪಡೆಯಲು ಕೃಷ್ಣಪ್ಪ ಅವರು ತೆರಳಿದ್ದರು. ಈ ಸಂದರ್ಭದಲ್ಲಿ ನಾಯಿ ದಾಳಿ ನಡೆಸಿದೆ.
ಕೃಷ್ಣಪ್ಪ ಅವರ ಪರವಾಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಕೆಲ ಶಿಕ್ಷಕರು, ಸರ್ವೇಯಲ್ಲಿನ ತಾಂತ್ರಿಕ ಅಡಚಣೆಗಳೇ ನಾಯಿ ದಾಳಿಗೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.



