ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇದೀಗ ಈ ಬಗ್ಗೆ ಸ್ಯಾಂಡಲ್ ವುಡ್ ನಟಿ ಪ್ರತಿಕ್ರಿಯಿಸಿದ್ದು ಕಾನೂನು ಎಲ್ಲಿರಿಗೂ ಒಂದೇ ಎಂದಿದ್ದಾರೆ.
Advertisement
ಸೋಷಿಯಲ್ ಮೀಡಿಯಾ ಖಾತೆ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ನಟಿ ರಮ್ಯಾ, ಕಾನೂನು ಎಲ್ಲರಿಗೂ ಒಂದೇ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಬರೆದುಕೊಂಡಿದ್ದಾರೆ.
ಕೆ.ಆರ್ ನಗರದ ಮನೆಗೆಲಸದ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದು ಇದರ ಫೋಟೋ, ವಿಡಿಯೋ ಕೂಡ ಇಟ್ಟುಕೊಂಡಿದ್ದರು. ಇದನ್ನು ರಾಜ್ಯ ಸರ್ಕಾರ ಎಸ್ಐಟಿಗೆ ಒಪ್ಪಿಸಿತ್ತು. ತನಿಖೆ ನಡೆಸಿದ್ದ ಎಸ್ಐಟಿ ವರದಿ ಹಾಗೂ ಸಾಕ್ಷಿ ಸಮೇತ ಕೋರ್ಟ್ಗೆ ಸಲ್ಲಿಕೆ ಮಾಡಿತ್ತು. ಎರಡು ಕಡೆಯ ವಾದ, ಪ್ರತಿವಾದ ಆಲಿಸಿ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.