ಇಂಗ್ಲೆಂಡ್ ಟೆಸ್ಟ್ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ: ನಾಯಕನಾಗಿ ಶುಭಮನ್ ಗಿಲ್ ಆಯ್ಕೆ!

0
Spread the love

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದ್ದು, ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. ಬಿಸಿಸಿಐ ಟೀಮ್ ಇಂಡಿಯಾದ ನೂತನ ನಾಯಕನಾಗಿ ಯುವ ಆಟಗಾರ ಶುಭ್ಮನ್ ಗಿಲ್ ನೇಮಿಸಲಾಗಿದೆಇನ್ನು ತಂಡದಲ್ಲಿ ಆರಂಭಿಕರಾಗಿ ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್ ಹಾಗೂ ಸಾಯಿ ಸುದರ್ಶನ್ ಕಾಣಿಸಿಕೊಂಡಿದ್ದಾರೆ. ಇವರಲ್ಲಿ ಇಬ್ಬರು ಇನಿಂಗ್ಸ್ ಆರಂಭಿಸುವುದು ಖಚಿತ. ಅಲ್ಲದೆ ಮತ್ತೊಬ್ಬರು ಮೂರನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ.

Advertisement

ಮಧ್ಯಮ ಕ್ರಮಾಂಕದ ಬ್ಯಾಟರ್ಗಳಾಗಿ ಕೆಎಲ್ ರಾಹುಲ್, ಕರುಣ್ ನಾಯರ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಯ್ಕೆಯಾಗಿದ್ದಾರೆ.ಆಲ್ರೌಂಡರ್ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ವೇಗದ ಬೌಲರ್ಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್ ಹಾಗೂ ಅರ್ಷದೀಪ್ ಸಿಂಗ್  ಆಯ್ಕೆಯಾಗಿದ್ದಾರೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಕೆಳಗಿನಂತಿದೆ

ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

 

 


Spread the love

LEAVE A REPLY

Please enter your comment!
Please enter your name here