ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ಬಸ್‌ಗಳಲ್ಲಿ ಹೆಣ್ಣುಮಕ್ಕಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಏಕೈಕ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಎಂಬ ಹೆಮ್ಮೆ, ಸಾರ್ಥಕತೆ ನಮಗಿದೆ ಎಂದು ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ ಸಂಭ್ರಮದ ಹಿನ್ನೆಯಲ್ಲಿ ಗದಗ ನಗರದ ಗಾನಯೋಗಿ ಪಂ. ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣದಲ್ಲಿ ಸೋಮವಾರ ಬಸ್‌ಗೆ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ಅವರು ಮಾತನಾಡಿದರು.
ಮಹಿಳಾ ಸಬಲೀಕರಣದ ಮಹತ್ವಾಕಾಂಕ್ಷೆಯೊAದಿಗೆ ಪ್ರಾರಂಭಿಸಲಾದ `ಶಕ್ತಿ’ ಯೋಜನೆಯ ಫಲಾನುಭವಿಗಳ ಸಂಖ್ಯೆ ಇಂದಿಗೆ 500 ಕೋಟಿ ಗಡಿಯನ್ನು ದಾಟಿ ದಾಖಲೆ ಬರೆದಿದೆ. ನಾಡಿನ ಹೆಣ್ಣುಮಕ್ಕಳು ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗೆ ಕುಟುಂಬದ ಯಜಮಾನನ ಮೇಲೆ ಅವಲಂಬಿತರಾಗದೆ ಸ್ವತಂತ್ರ ನಿರ್ಣಯ ಕೈಗೊಂಡು ಸ್ವಾವಲಂಬಿ ಬದುಕಿನೆಡೆಗೆ ಪಯಣಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಇದು ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಗ್ಗೆ ಹೆಮ್ಮೆಯಿದೆ ಎಂದರು.
ಗದಗ ತಾಲೂಕು ಸಾರಿಗೆ ಘಟಕದಲ್ಲಿ 8,31,378 ಮಹಿಳಾ ಪ್ರಯಾಣಿಕರು ಪ್ರಯಾಣ ಬೆಳೆಸುವ ಮೂಲಕ ದಾಖಲೆಯ 253.28 ಲಕ್ಷ ರೂ ಟಿಕೆಟ್ ಮೊತ್ತದ ಪ್ರಯಾಣ ಮಾಡಿದ್ದಾರೆ. ಅದರಂತೆ ಗದಗ ಜಿಲ್ಲೆಯಲ್ಲಿ 10.98 ಲಕ್ಷ ಮಹಿಳೆಯರು ಪ್ರಯಾಣಿಸುವ ಮೂಲಕ 358.89 ಕೋಟಿ ರೂ ಆದಾಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಶಂಭು ಎಸ್.ಕಾಳೆ, ಮೀನಾಕ್ಷಿ ಬೆನಕಣ್ಣನವರ, ಸಾವಿತ್ರಿ ಹೂಗಾರ, ದಯಾನಂದ್ ಪವಾರ, ಸಂಗು ಕರೆಕಲಮಟ್ಟಿ, ಎನ್.ಬಿ. ದೇಸಾಯಿ, ಸಂಗಮೇಶ್ ಹಾದಿಮನಿ, ರಮೇಶ್ ಹೊನ್ನಿನಾಯ್ಕರ, ದೇವರಡ್ಡಿ ತಿರ್ಲಾಪುರ್, ಮಲ್ಲಪ್ಪ ಚಿಂಚಲಿ, ಗಣೇಶ್ ಸಿಂಗ್ ಮಿಟಾಡೆ, ಮಲ್ಲಪ್ಪ ಬಾರಕೇರ, ಭಾಷಾಸಾಬ್ ಮಲ್ಲಸಮುದ್ರ, ಗಣರಾದ ಬಸವರಾಜ ಕಡೆಮನಿ, ಜಾನಕಿ ಮಲ್ಲಾಪುರ, ಶರೀಫ್ ಬಿಳಿಯಲಿ, ಕೆಎಸ್‌ಆರ್‌ಟಿಸಿ ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಡಿ ದೇವರಾಜ, ವಿಭಾಗೀಯ ಸಂಚಲನಾಧಿಕಾರಿ ಪಿ.ವೈ. ಮೇತ್ರಿ, ಡಿಪೋ ಮ್ಯಾನೇಜರ್ ಬಿ.ಎಲ್. ಗೆಣ್ಣೂರ, ನಿಯಂತ್ರಕರಾದ ವೆಂಕಟೇಶ್ ಜಾದವ, ಶಿವಾನಂದ ಸಂಗಣ್ಣನವರ, ಎಂ.ಬಿ. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಪೀರ್‌ಸಾಬ್ ಕೌತಾಳ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಸಮಿತಿಯ ಜಿಲ್ಲಾ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಕೃಷ್ಣಗೌಡ ಹೆಚ್.ಪಾಟೀಲ ಸೇರಿದಂತೆ ಎಲ್ಲ ಸದಸ್ಯರು ನೆರೆದ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.
“ಐದು ಗ್ಯಾರಂಟಿ ಯೋಜನೆಗಳ ಪೈಕಿ ರಾಜ್ಯ ಸರ್ಕಾರ ಮೊದಲು ಜಾರಿಗೊಳಿಸಿದ `ಶಕ್ತಿ’ ಯೋಜನೆ ರಾಜ್ಯದ ಎಲ್ಲಾ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿ ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾರಣವಾಗಿದೆ”
– ಕೃಷ್ಣಗೌಡ ಹೆಚ್.ಪಾಟೀಲ.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ
ಪ್ರಾಧಿಕಾರದ ಸದಸ್ಯರು.