HomeGadag Newsರಜೆ ಮಂಜೂರು ಮಾಡಲು ಮನವಿ

ರಜೆ ಮಂಜೂರು ಮಾಡಲು ಮನವಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ವಿವಿಧ ಕಾನೂನುಬದ್ಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಅಧಿಕಾರಿಗಳು, ನೌಕರರ ಎಲ್ಲಾ ವೃಂದ ಸಂಘಗಳು, ನರೇಗಾ ನೌಕರರು, ಗ್ರಾ.ಪಂ ಹೊರಗುತ್ತಿಗೆ ನೌಕರರ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಸಹಯೋಗದಲ್ಲಿ ಅ.4ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ಧಿಷ್ಟಾವಧಿ ಹೋರಾಟಕ್ಕೆ ರಜೆ ಮಂಜೂರು ಮಾಡುವಂತೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಬಡಿಗೇರ ಅವರಿಗೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ನೌಕರರ ಸಂಘದ ಮುಖಂಡರು ಮನವಿ ಸಲ್ಲಿಸಿದರು.

ನೌಕರರ ಸಂಘದ ಮುಖಂಡರು ಮಾತನಾಡಿ, ಗಜೇಂದ್ರಗಡ ತಾಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಮ ಪಂಚಾಯಿತಿಯ ಎಲ್ಲ ಪಂಚ ನೌಕರರಾದ ಪಿ.ಡಿ.ಓ, ಕರ ವಸೂಲಿಗಾರರು, ಜಲಗಾರರು, ಕಛೇರಿ ಸಹಾಯಕರು, ಸ್ವಚ್ಛತಾಗಾರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸದೇ ಕೇವಲ ಪಂಚಾಯತ ಅಭಿವೃದ್ಧಿ ಅಧಿಕಾರಿಗಳನ್ನು, ನೌಕರರನ್ನು ಹಾಗೂ ಸಿಬ್ಬಂದಿಗಳನ್ನು ನೇರ ಹೊಣೆಗಾರರನ್ನಾಗಿಸಲಾಗುತ್ತಿದೆ ಎಂದರು.

ಈ ವೇಳೆ ಪಿಡಿಒ ಮಹಾಂತೇಶ ತಳವಾರ, ಹುಲ್ಲಪ್ಪ ಹಳಲ್ಳಿಕೇರಿ, ಬಿ.ಎನ್. ಇಟಗಿಮಠ, ತನವೀರ್ ದೊಡ್ಡಮನಿ, ಪ್ರಕಾಶ ನರೇಗಲ್, ಮರಿಲಿಂಗಪ್ಪ ಮುತಾರಿ, ಎಸ್.ಆರ್. ಸಂಕನೂರು, ಮುದಕಪ್ಪ ದೊಣ್ಣೆಗುಡ್ಡ, ಮಲ್ಲಪ್ಪ ಉಪ್ಪಾರ, ಮಹೇಶ ಭಗವತಿ, ಪರಶುರಾಮ್ ಮ್ಯಾಗಲಮನಿ, ಮಲ್ಲಪ್ಪ ಹೂಗಾರ, ಸಕ್ರಪ್ಪ ಬಿಳೇಕಲ್ ಸೇರಿದಂತೆ ಇತರರು ಹಾಜರಿದ್ದರು.

ಸರ್ಕಾರ ಮತ್ತು ಇಲಾಖೆಯ ಇಂತಹ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 4ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿಯ ಸೇವೆಗಳಾದ ಬಾಪೂಜಿ ಸೇವೆ ಹಾಗೂ ಕಛೇರಿಯ ಎಲ್ಲಾ ಕರ್ತವ್ಯ (ಕುಡಿಯುವ ನೀರು, ಬೀದಿ ದೀಪ ಹಾಗೂ ಸ್ವಚ್ಛತೆ ಹೊರತುಪಡಿಸಿ) ನಿರ್ವಹಿಸುವುದನ್ನು ನಿಲ್ಲಿಸಿ ಅನಿರ್ಧಿಷ್ಟಾವಧಿ ಹೋರಾಟ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿದ್ದು, ಸದರಿ ಹೋರಾಟದಲ್ಲಿ ಪಾಲ್ಗೊಳ್ಳುವುದರಿಂದ ಅಕ್ಟೋಬರ್ ೪ರಿಂದ ರಜೆ ಮಂಜೂರು ಮಾಡವಂತೆ ಮನವಿ ಸಲ್ಲಿಸಿದರು.

 


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!