ಪರೀಕ್ಷೆ ಬರೆಯಲು ಹರಸಾಹಸ: ತಂದೆ ಕೈ ಹಿಡಿದು ತುಂಬಿ ಹರಿಯುತ್ತಿರುವ ನದಿ ದಾಟಿದ ವಿದ್ಯಾರ್ಥಿನಿ!

0
Spread the love

ಕಲಬುರಗಿ:- ಪರೀಕ್ಷೆ ಬರೆಯಲು ವಿದ್ಯಾರ್ಥಿನಿಯೋರ್ವರು ಹರಸಾಹಸಪಟ್ಟಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

Advertisement

ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದು, ಒಂದೆಡೆ ಜನಜೀವನ ಅಸ್ತವ್ಯಸ್ತ ಆಗಿದೆ. ಮತ್ತೊಂದಡೆ ವಿದ್ಯಾರ್ಥಿನಿಯೊಬ್ಬಳು ಪ್ರಾಣದ ಹಂಗು ತೊರೆದು ಪರೀಕ್ಷೆ ಬರೆಯಲು ಉಕ್ಕಿ ಹರಿಯುತಿದ್ದ ನದಿ ದಾಟಿದ ಪ್ರಸಂಗ ನಡೆದಿದೆ.

ಉಕ್ಕಿ ಹರಿಯುತಿದ್ದ ನದಿ ದಾಟಿದ ಯುವತಿಯನ್ನು ರಾಣಿ ಎಂದು ಗುರುತಿಸಲಾಗಿದೆ. ಜಿಲ್ಲೆಯ ಸೇಡಂ ತಾಲೂಕಿನ ಸಂಗಾವಿ (ಟಿ) ಗ್ರಾಮದ ಬಿಎ ಅಂತಿಮ ವರ್ಷದ ವಿಧ್ಯಾರ್ಥಿನಿ ರಾಣಿ ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ನದಿ ದಾಟಿದ್ದಾಳೆ. ಪರೀಕ್ಷೆ ಬರೆಯಲು ಸೇಡಂ ಪಟ್ಟಣಕ್ಕೆ ಹೋಗುವಾಗ ವಿದ್ಯಾರ್ಥಿನಿಯ ತಂದೆ ಹೆಗಲಿಗೆ ಬ್ಯಾಗ್ ಹಾಕಿಕೊಂಡು ಮಗಳ ಕೈಹಿಡಿದು ಕಾಗಿಣಾ ನದಿ ದಾಟಿಲು ಹರಸಾಹಸಪಟ್ಟಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.


Spread the love

LEAVE A REPLY

Please enter your comment!
Please enter your name here