ಸನ್ಮಾರ್ಗ ಮಹಾವಿದ್ಯಾಲಯದ ವಿದ್ಯಾರ್ಥಿಯ ಸಾಧನೆ

0
sanmana
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಸನ್ಮಾರ್ಗ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಹಿಂದಿನ ವಿದ್ಯಾರ್ಥಿನಿ ಪೂರ್ಣಿಮಾ ಎಮ್.ಸವದತ್ತಿಮಠ, I.I.T  ವತಿಯಿಂದ ಜನವರಿ 2024ರಲ್ಲಿ ಜರುಗಿದJoint Addmission Test for Masters (JAM) ರಾಷ್ಟ್ರೀಯ ಮಟ್ಟದ ಗಣಿತ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ 1802ನೇ ಸ್ಥಾನವನ್ನು ಪಡೆದು, I.I.Tಯಲ್ಲಿಯೇ I.I.T ಸ್ನಾತಕ ಪದವಿ ಅಭ್ಯಸಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

Advertisement

ಈ ಸಾಧನೆಯ ಹಿನ್ನೆಲೆಯಲ್ಲಿ ಸನ್ಮಾರ್ಗ ಪ.ಪೂ ಮಹಾವಿದ್ಯಾಲಯದ ಆಡಳಿತ ಮಂಡಳಿಯ ವತಿಯಿಂದ ವಿದ್ಯಾರ್ಥಿನಿ ಪೂರ್ಣಿಮಾರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಹಾವಿದ್ಯಾಲಯದ ನಿರ್ದೇಶಕ ಉಡುಪಿ ದೇಶಪಾಂಡೆ, ಮುಂದೆ ಗುರಿ, ಹಿಂದೆ ಗುರು ಇದ್ದರೆ ನೀವು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ನಮ್ಮ ಹಿಂದಿನ ವಿದ್ಯಾರ್ಥಿನಿ ಪೂರ್ಣಿಮಾ ಸವದತ್ತಿಮಠರೇ ಸಾಕ್ಷಿ ಎಂದರು.

ಸಮಾರಂಭದಲ್ಲಿ ಸಂಸ್ಥೆಯ ಚೇರಮನ್ ಪ್ರೊ.ರಾಜೇಶ ಕುಲಕರ್ಣಿ, ಪ್ರಾಚಾರ್ಯ ಪ್ರೇಮಾನಂದ ರೋಣದ, ಪದಾಧಿಕಾರಿಗಳಾದ ಪ್ರೊ. ರೋಹಿತ ಒಡೆಯರ್, ಪ್ರೊ.ರಾಹುಲ ಒಡೆಯರ್, ಪ್ರೊ. ಸೈಯದ ಮತಿನ್ ಮುಲ್ಲಾ, ಪ್ರೊ. ಪುನೀತ ದೇಶಪಾಂಡೆ. ಆಡಳಿತಾಧಿಕಾರಿ ಎಂ.ಸಿ. ಹಿರೇಮಠ, ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here