ಮೊಬೈಲ್ ನೋಡಬೇಡ ಎಂದು ಬುದ್ದಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!

0
Spread the love

ಶಿವಮೊಗ್ಗ: ಮೊಬೈಲ್ ನೋಡಬೇಡ ಎಂದು ತಾಯಿ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿ ನಡೆದಿದೆ. ಧನುಶ್ರೀ (೨೦) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ಯಾವಾಗಲೂ ಮೊಬೈಲ್‌ ನೋಡುವುದರಲ್ಲೇ ಕಾಲಹರಣ ಮಾಡುತ್ತಿದ್ದ ಮಗಳಿಗೆ ತಾಯಿ ಬುದ್ದಿವಾದ ಹೇಳಿದ್ದಾರೆ. ಮೊಬೈಲ್ ಹೆಚ್ಚಾಗಿ ನೋಡಬೇಡ ಎಂದು ಹೇಳಿದ್ದಾರೆ. ಇದರಿಂದ ಮನನೊಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

Advertisement

ಸೋಮವಾರ ಸಂಜೆ 7 30 ಗೆ ಕಾಲೇಜು ಕಾಲೇಜ್ ಮುಗ್ಸಿ ಮನೆಗೆ ಬಂದಾಗ ಘಟನೆ ನಡೆದಿದ್ದು, ಕಳೆನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here