ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಕೃಷ್ಣಗೌಡ ಹೆಚ್. ಪಾಟೀಲ ಅವರ ವೈಯಕ್ತಿಕ ಆಸಕ್ತಿಯಿಂದ 10ನೇ ತರಗತಿ ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕಾಗಿ ‘ಉತ್ಕರ್ಷತೆಯೆಡೆಗೆ’ ವಿದ್ಯಾರ್ಥಿ ಸ್ನೇಹಿ ಕಾರ್ಯಾಗಾರವನ್ನು 3 ದಿನಗಳ ಕಾಲ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ಕುರಿತು ಸಲಹೆ-ಸೂಚನೆಗಳನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯವನ್ನು ಹೋಗಲಾಡಿಸಲು ಪ್ರಯತ್ನಿಸಲಾಯಿತು. ಜೊತೆಗೆ, ಇದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಮೂಡಿಸಲು ಸಹಕಾರಿ ಆಯಿತು.
ಈ ಕಾರ್ಯಾಗಾರದಿಂದ ಉತ್ತಮ ಫಲಿತಾಂಶ ದೊರೆಯಲಿದೆ ಎಂಬ ಭರವಸೆ ವ್ಯಕ್ತವಾಗಿದೆ. ಇದು ನಮ್ಮ ಯುವ ನಾಯಕರ ದೂರದೃಷ್ಟಿ ಹಾಗೂ ವಿದ್ಯಾರ್ಥಿಗಳ ಮೇಲಿರುವ ಕಾಳಜಿಯನ್ನು ತೋರಿಸುತ್ತದೆ ಎಂದು ಗದಗ ಬೆಟಗೇರಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅನ್ವರ್ ನದಾಫ್ ಹಾಗೂ ಅಭಿಷಯ್ ತಿಳಿಸಿದ್ದಾರೆ.



