ಯಾದಗಿರಿ:- ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
Advertisement
ಶಹಾಪುರ ಪೊಲೀಸರಿಂದ ಆರೋಪಿ ಪರಮಣ್ಣ ನನ್ನು ಬಂಧಿಸಲಾಗಿದೆ. ಸದ್ಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿತ್ತು. ಪ್ರಕರಣ ದಾಖಲಾದಾಗ ಎ1 ಆರೋಪಿ ಸ್ಥಾನ ಖಾಲಿ ಇಡಲಾಗಿತ್ತು. ಈಗ ಪರಮಣ್ಣನನ್ನು ಬಂಧಿಸಿ ಎ1 ಆರೋಪಿ ಮಾಡಿದ್ದಾರೆ.
ಬಂಧಿತ ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜೊತೆ ಸಂಬಂಧ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದ ಎಂದು ತಿಳಿದುಬಂದಿದೆ.