ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಕ್ಷೇತ್ರದಲ್ಲಿ ಅನೇಕ ಸರಕಾರಿ ಶಾಲಾ-ಕಾಲೇಜುಗಳಲ್ಲಿ ಅವಶ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅನೇಕ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಪಡೆದುಕೊಂಡು ಶೈಕ್ಷಣಕ ಸಾಧನೆಯ ಹಾದಿಯಲ್ಲಿ ಸಾಗಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಅವರು ಪಟ್ಟಣದ ತೋಟಪ್ಪ ಮಾನ್ವಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಮೂಲಭೂತ ಸೌಲಭ್ಯಗಳ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಸರಕಾರಗಳು ಶಿಕ್ಷಣ ಕ್ಷೇತ್ರದಲ್ಲಿ ಎಲ್ಲ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು ಎನ್ನುವ ಉದ್ದೇಶದಿಂದ ಹಲವಾರು ಸೌಲಭ್ಯಗಳನ್ನು ಒದಗಿಸುತ್ತಿವೆ. ಸರಕಾರ ಒದಗಿಸುವ ಯೋಜನೆಗಳನ್ನು ಪಡೆದುಕೊಳ್ಳುವದರೊಂದಿಗೆ ಸಾಧನೆ ಮಾಡುವ ಛಲ ವಿದ್ಯಾರ್ಥಿಗಳಲ್ಲಿ ಬರಬೇಕು. ವಿದ್ಯಾರ್ಥಿ ಜೀವನ ಹೂವಿನ ಹಾಸಿಗೆಯಲ್ಲ, ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದಿಂದ ಮಾತ್ರ ಯಶಸ್ಸು ಸಿಗುತ್ತದೆ. ಕ್ಷೇತ್ರದಲ್ಲಿನ ಖಾಸಗಿ, ಸರಕಾರಿ ಎಲ್ಲ ಶಾಲಾ-ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳು ದೊರೆಯಬೇಕೆಂಬ ಉದ್ದೇಶವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪಟ್ಟಣದ ಪ.ಪೂ ಕಾಲೇಜಿಗೆ ಅವಶ್ಯವಿರುವ ಸೌಲಭ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಸುನೀಲ ಮಹಾಂತಶೆಟ್ಟರ, ನವೀನ ಬೆಳ್ಳಟ್ಟಿ, ಬಸವರಾಜ ಚಕ್ರಸಾಲಿ, ಗಿರೀಶ ಚೌರಡ್ಡಿ, ಬಸವರಾಜ ಶೆಟ್ಟರ, ಮಂಜುನಾಥ ಗೊರವರ, ಶಕ್ತಿ ಕತ್ತಿ, ಅನಿಲ ಮುಳುಗುಂದ, ನೀಲಪ್ಪ ಹತ್ತಿ, ಸಂತೋಷ ಜಾವೂರ, ತೋಂಟೇಶ ಮಾನ್ವಿ, ವಿಜಯ ಮೆಕ್ಕಿ, ಮೈನು, ಗದಗ ಜಿಇ ಅನಿಲ ಚೌರಡ್ಡಿ, ಕಾಲೇಜು ಪ್ರಾಚಾರ್ಯ ಮಂಜುನಾಥ ಕೊಕ್ಕರಗುಂದಿ, ಉಪನ್ಯಾಸಕರುಗಳಾದ ಬಿ.ಎನ್. ದೊಡ್ಡಮನಿ, ವಿನಾಯಕ ವೇತಾಳ, ಎನ್.ಓ. ಸಾತಪುತೆ ಸೇರಿದಂತೆ ಕಾಲೇಜು ಸಿಬ್ಬಂದಿಗಳು ಇದ್ದರು.