ಬೆಂಗಳೂರು: ವಿದ್ಯಾರ್ಥಿನಿ ಯಾಮಿನಿ ಪ್ರಿಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಘ್ನೇಶ್ ನನ್ನು ಬಂಧಿಸಲಾಗಿದೆ. ಶ್ರೀರಾಮಪುರ ಪೊಲೀಸರು ಸೋಲದೇನಹಳ್ಳಿ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.
ನಿನ್ನೆ ಕಾಲೇಜು ಮುಗಿಸಿಕೊಂಡು ವಾಪಸ್ ಮನೆಗೆ ಬರುತ್ತಿದ್ದ ವೇಳೆ ಮಂತ್ರಿಮಾಲ್ ಹಿಂಭಾಗದ ರೈಲ್ವೆ ಟ್ರ್ಯಾಕ್ ಬಳಿ ಪ್ರಿಯಾಳನ್ನು ವಿಘ್ನೇಶ್ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದ. ಪ್ರಕರಣ ಸಂಬಂಧ ಶ್ರೀರಾಂಪುರ ಪೊಲೀಸರು ಕಾರ್ಯಚರಣೆ ನಡೆಸಿ ವಿಘ್ನೇಶ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
20 ವರ್ಷದ ಯಾಮಿನಿ ಪ್ರಿಯಾ ನಿನ್ನೆ ಕಾಲೇಜು ಮುಗಿಸಿಕೊಂಡು ವಾಪಸ್ ಮನೆಗೆ ಬರುತ್ತಿದ್ದಳು. ಮಂತ್ರಿಮಾಲ್ ಹಿಂಭಾಗದ ರೈಲ್ವೆ ಟ್ರ್ಯಾಕ್ ಬಳಿ ಪ್ರಿಯಾಳನ್ನು ವಿಘ್ನೇಶ್ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿದ್ದಾನೆ.
ಬಳಿಕ ಕತ್ತು ಕೊಯ್ದು ಪರಾರಿಯಾಗಿದ್ದ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶ್ರೀರಾಂಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ ಹಂತಕ ವಿಘ್ನೇಶ್ ಬಂಧನಕ್ಕೆ ಬಲೆ ಬೀಸಿದ್ದರು. ಅಂತಿಮವಾಗಿ ಇಂದು ಸೋಲದೇವನಹಳ್ಳಿಯಲ್ಲಿ ಸಿಕ್ಕಿಬಿದ್ದಿದ್ದು, ವಿಚಾರಣೆಗೊಳಪಡಿಸಿದ್ದಾರೆ.



