HomeGadag Newsಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ

ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಗದುಗಿನ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಶಿಗ್ಲಿ ಗ್ರಾಮದ ಗ್ರಾಮಭಾರತಿ ಶಿಕ್ಷಣ ಸಮಿತಿಯ ಎಸ್.ಎಸ್.ಕೂಡ್ಲಮಠ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಲಕ್ಷ್ಮಿ ಬಾಳಿಕಾಯಿ ಸರಪಳಿ ಗುಂಡು ಎಸೆತದಲ್ಲಿ ಪ್ರಥಮ, ಮಂಜುನಾಥ ಹಳೆರಿತ್ತಿ ಬಾಲಕರ ವಿಭಾಗದ ಸರಪಳಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕೀರ್ತಿ ತಂದಿದ್ದಾರೆ.

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಹಾಗೂ ತರಬೇತಿ ನೀಡಿದ ಕೆ.ಆರ್. ಲಮಾಣಿ ಇವರಿಗೆ ಸಂಸ್ಥೆಯ ಚೇರಮನ್ ಎಸ್.ಪಿ. ಬಳಿಗ್ಫರ, ಕಾರ್ಯದರ್ಶಿ ಸಿ.ಎಂ. ರಾಗಿ, ಮುಖ್ಯೋಪಾಧ್ಯಾಯ ಸಿ.ಬಿ. ಮೊಗಲಿ, ಸಂಸ್ಥೆಯ ಸರ್ವ ಸದಸ್ಯರು, ಪದಾಧಿಕಾರಿಗಳು, ಶಾಲೆಯ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img