ಧಾರವಾಡ: ಸಮಯಕ್ಕೆ ಸರಿಯಾಗಿ ಸರ್ಕಾರಿ ಸಾರಿಗೆ ಬಸ್ ಬಿಡಲು ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಅಕ್ರೋಶ ಹೊರಹಾಕಿದರು.
ನಗರದ ಕೆಲಗೇರಿ ಬಳಿಯ ಧಾರವಾಡ ಗೋವಾ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ಧ ಹಾಗೂ ಸಚಿವರ ವಿರುದ್ಧ ತಮ್ಮ ಅಸಮಧಾನ ವ್ಯಕ್ತಪಡಿಸಿದರು. ಮಕ್ಕಳ ಹೋರಾಟಕ್ಕೆ ಪೋಷಕರು ಹಾಗೂ ಸ್ಥಳೀಯ ನಿವಾಸಿಗಳು ಕೂಡಾ ಸಾಥ್ ನೀಡಿದರು.
ಇನ್ನೂ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರ ಬಂದ್ ಆಗಿತ್ತು. ವಾರದ ಎರಡು ದಿನದಲ್ಲಿ ಮಾತ್ರ ಸಮಯಕ್ಕೆ ಸರಿಯಾಗಿ ಬಸ್ ಬರುತ್ತೆ, ಉಳಿದ ದಿನ ಬಸ್ ಬರದೆ ನಾವು ಒರದಾಟ ಮಾಡಬೇಕಾಗಿದೆ.
ಸಮಯಕ್ಕೆ ಶಾಲೆಗೆ ತೆರಳಲು ಆಗುತ್ತಿಲ್ಲ. ಜೊತೆಗೆ ಇದರಿಂದಾಗಿ ನಮ್ಮ ಶಿಕ್ಷಣಕ್ಕೂ ತೊಂದರೆಯಾಗುತ್ತಿದೆ. ಹಾಗಾಗಿ ಈ ಕೂಡಲೇ ನಮಗೆ ಸಾರಿಗೆ ಬಸ್ಸನಿಂದಾಗುತ್ತಿರುವ ತೊಂದರೆ ಆದಷ್ಟು ಬೇಗ ಸರಿ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಹಾಗೂ ಸಾರಿಗೆ ಸಚಿವರಿಗೆ ಎಚ್ಚರಿಕೆ ನೀಡಿದರು.