HomeBengaluru Newsಉಚಿತ ಬಸ್ ಪಾಸ್‌ಗೆ ವಿದ್ಯಾರ್ಥಿಗಳ ಭರ್ಜರಿ ಸ್ಪಂದನೆ! 2 ದಿನದಲ್ಲಿ 2,764 ಪಾಸ್ ವಿತರಣೆ

ಉಚಿತ ಬಸ್ ಪಾಸ್‌ಗೆ ವಿದ್ಯಾರ್ಥಿಗಳ ಭರ್ಜರಿ ಸ್ಪಂದನೆ! 2 ದಿನದಲ್ಲಿ 2,764 ಪಾಸ್ ವಿತರಣೆ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಉಚಿತ ವಿದ್ಯಾರ್ಥಿ ಬಸ್ ಪಾಸ್ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ಸ್ಪಂದನೆ ವ್ಯಕ್ತವಾಗಿದ್ದು, ಯೋಜನೆ ಆರಂಭವಾದ ಮೊದಲ ಎರಡು ದಿನಗಳಲ್ಲೇ ಸಾವಿರಾರು ವಿದ್ಯಾರ್ಥಿಗಳು ಪಾಸ್ ಪಡೆದುಕೊಂಡಿದ್ದಾರೆ.

ಜೂನ್ 11ರಂದು ಸರ್ಕಾರ ಉಚಿತ ಬಸ್ ಪಾಸ್ ಯೋಜನೆಗೆ ಅನುಮೋದನೆ ನೀಡಿದ ಬೆನ್ನಲ್ಲೇ, ನಾಲ್ಕು ಸಾರಿಗೆ ನಿಗಮಗಳ ಮೂಲಕ ಕೇವಲ ಎರಡು ದಿನಗಳಲ್ಲಿ ಒಟ್ಟು 2,764 ವಿದ್ಯಾರ್ಥಿ ಪಾಸ್‌ಗಳನ್ನು ವಿತರಿಸಲಾಗಿದೆ. ಯೋಜನೆ ಜಾರಿಯಾದ ಮೊದಲ ದಿನ 821 ಪಾಸ್‌ಗಳು ಹಾಗೂ ಎರಡನೇ ದಿನ 1,943 ಪಾಸ್‌ಗಳನ್ನು ವಿತರಿಸಲಾಗಿದೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅತಿ ಹೆಚ್ಚು 995 ಪಾಸ್‌ಗಳನ್ನು ವಿತರಿಸಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ  860, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 641 ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 268 ಪಾಸ್‌ಗಳನ್ನು ವಿತರಿಸಿವೆ.

ಈ ಯೋಜನೆಯ ವಿಶೇಷತೆಯೆಂದರೆ, ಕರ್ನಾಟಕದ ಗಡಿಭಾಗದಲ್ಲಿ ವಾಸಿಸಿ ನೆರೆ ರಾಜ್ಯಗಳ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ನೆರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಈ ಸೌಲಭ್ಯ ಲಭ್ಯವಾಗಲಿದೆ.

ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ಬಸ್ ಪಾಸ್ ನೀಡುವ ಈ ಯೋಜನೆಗಾಗಿ ರಾಜ್ಯ ಸರ್ಕಾರ ವಾರ್ಷಿಕ ಸುಮಾರು 286.08 ಕೋಟಿ ರೂಪಾಯಿ ವೆಚ್ಚ ಮಾಡುವ ನಿರೀಕ್ಷೆಯಿದೆ. ಇದಲ್ಲದೆ ಅಪಘಾತ ಪರಿಹಾರ ನಿಧಿ ಹಾಗೂ ಪ್ರಕ್ರಿಯಾ ವೆಚ್ಚಕ್ಕಾಗಿ ಹೆಚ್ಚುವರಿಯಾಗಿ 15 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಈ ಹಿಂದೆ ವಿದ್ಯಾರ್ಥಿ ಪಾಸ್ ವೆಚ್ಚವನ್ನು ಸರ್ಕಾರ, ಸಾರಿಗೆ ನಿಗಮಗಳು ಮತ್ತು ವಿದ್ಯಾರ್ಥಿಗಳು ಹಂಚಿಕೊಂಡು ಭರಿಸುತ್ತಿದ್ದರು. ಆದರೆ ಹೊಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಪಾಸ್ ನೀಡಲಾಗುತ್ತಿದೆ.

ಅರ್ಹ ವಿದ್ಯಾರ್ಥಿಗಳು ತಮ್ಮ ಶಾಲೆ ಅಥವಾ ಕಾಲೇಜುಗಳ ಮೂಲಕ ಹಾಗೂ ಸೇವಾ ಸಿಂಧು ಪೋರ್ಟಲ್ ಮೂಲಕ ಉಚಿತ ವಿದ್ಯಾರ್ಥಿ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಗೆ ದೊರೆತಿರುವ ಸ್ಪಂದನೆ ಸರ್ಕಾರದ ನಿರೀಕ್ಷೆಗೂ ಮೀರಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!