HomeGadag Newsವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಗಮನ ನೀಡಿ

ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಗಮನ ನೀಡಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮಾದಕ ದ್ರವ್ಯ ಹಾಗೂ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಹೇಳಿದರು.

ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ಬಳಕೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಲು ಮತ್ತು ಉತ್ತಮ ಸಮಾಜ ನಿರ್ಮಿಸಲು ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಹೆಚ್ಚು ಗಮನ ಕೊಡಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಿಗಳಾಗಬಾರದು. ಮಾದಕ ವಸ್ತುಗಳು ಕುಟುಂಬದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಅವುಗಳ ಬಗ್ಗೆ ಜಾಗೃತರಾಗಿರಬೇಕು. ಸ್ವಸ್ಥ ಸಮಾಜದಲ್ಲಿ ಆರೋಗ್ಯವಂತ ಜೀವನ ನಡೆಸಬೇಕು. ಸಮಾಜದಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಟವನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು, ಪೋಷಕರ ಸಹಕಾರ ಅತ್ಯಗತ್ಯ ಎಂದು ಹೇಳಿದರು.

ಪ್ರತಿ ವರ್ಷ ಜೂನ್ ೨೬ರಂದು ಮಾದಕ ವಸ್ತುಗಳ ದುರ್ಬಳಕೆ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತಾರಾಷ್ಟ್ರೀಯ ದಿನವನ್ನು `ವಿಶ್ವ ಮಾದಕ ವಸ್ತು ಬಳಕೆ ವಿರೋಧಿ ದಿನ’ ಎಂದು ಆಚರಿಸಲಾಗುತ್ತದೆ. ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸುವುದು ಇದರ ಮುಖ್ಯ ಉದ್ದೇಶ. ಸಮಾಜದ ಜವಾಬ್ದಾರಿಯುತ ಪ್ರಜೆಗಳಾಗಿ, ಮಾದಕ ವಸ್ತುಗಳ ಮಾರಾಟ ಮತ್ತು ಅಕ್ರಮ ಸಾಗಾಟದಂತಹ ಪ್ರಕರಣಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ಎಸ್‌ಪಿ ಬಿ.ಎಸ್. ನೇಮಗೌಡ ತಿಳಿಸಿದರು.

ಇದೇ ಸಂದರ್ಭದಲ್ಲಿ ನೆರೆದಿದ್ದ ವಿದ್ಯಾರ್ಥಿಗಳು, ಸಾರ್ವಜನಿಕರು `ಮಾದಕ ವಸ್ತುಗಳನ್ನು ಬಳಸುವುದಿಲ್ಲ’ ಎನ್ನುವ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಡಾ. ಅರವಿಂದ ಉಪನ್ಯಾಸ ನೀಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಅಬಕಾರಿ ಡಿಸಿ ಲಕ್ಷ್ಮೀ, ಸಿಪಿಐಗಳಾದ ಧೀರಜ ಶಿಂಧೆ, ಶಿವಯೋಗಿ ಕಳಸದ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ತರುವಾಯ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯಾರ್ಥಿಗಳಿಂದ ಮಾದಕ ವ್ಯಸನ ವಿರೋಧಿ ಜಾಗೃತಿ ಜಾಥಾ ನೆರವೇರಿತು.

ಇತ್ತೀಚಿನ ವರ್ಷಗಳಲ್ಲಿ ವಿಶ್ವದಾದ್ಯಂತ ಮಕ್ಕಳು ಮತ್ತು ಯುವಕರು ಮಾದಕ ವಸ್ತುಗಳ ದುಶ್ಚಟಗಳಿಗೆ ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನು ಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಡ್ರಗ್ ಮಾಫಿಯಾವನ್ನು ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದನ್ನು ಬೇರುಸಹಿತ ಕಿತ್ತುಹಾಕಲು ಸಾರ್ವಜನಿಕರ ಸಹಕಾರ ಕೂಡ ಅಷ್ಟೇ ಪ್ರಮುಖವಾಗಿದೆ.

– ಬಿ.ಎಸ್. ನೇಮಗೌಡ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!