HomeGadag Newsಚುರುಮುರಿ ತಿಂದು ಅಸ್ವಸ್ಥರಾದ ವಿದ್ಯಾರ್ಥಿಗಳು

ಚುರುಮುರಿ ತಿಂದು ಅಸ್ವಸ್ಥರಾದ ವಿದ್ಯಾರ್ಥಿಗಳು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಮನೆಯಿಂದ ತಂದಿದ್ದ ಚುರುಮುರಿ ತಿಂದು 6 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಬೆಟಗೇರಿಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಮಂಗಳವಾರ ನಡೆದಿದೆ.

ಬೆಟಗೇರಿಯಲ್ಲಿ ಇದೇ ವರ್ಷ ಆರಂಭಗೊಂಡಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ 50 ವಿದ್ಯಾರ್ಥಿಗಳು ಇದ್ದಾರೆ. ಎಲ್ಲ ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಉಪ್ಪಿಟ್ಟು ಸೇವಿಸಿದ್ದಾರೆ. ಈ ವೇಳೆ ಒಬ್ಬ ವಿದ್ಯಾರ್ಥಿನಿ ಮನೆಯಿಂದ ತಂದಿದ್ದ ಚುರುಮುರಿಯನ್ನು 6 ಮಂದಿ ಸ್ನೇಹಿತೆಯರೊಂದಿಗೆ ಹಂಚಿಕೊಂಡು ತಿಂದಿದ್ದಾಳೆ. ಸ್ವಲ್ಪ ಸಮಯದ ನಂತರ ಅವರೆಲ್ಲರೂ ಅಸ್ವಸ್ಥಗೊಂಡಿದ್ದು, ತಕ್ಷಣ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಮಿತ್ ಬಿದರಿ ಆರ್ ತಿಳಿಸಿದ್ದಾರೆ.

ಬೆಟಗೇರಿ ಆಸ್ಪತ್ರೆಯಿಂದ ಮಕ್ಕಳನ್ನು ಜಿಮ್ಸ್ಗೆ ಕರೆದೊಯ್ಯಲಾಗಿದೆ. ಅಲ್ಲಿನ ವೈದ್ಯರು ಮಕ್ಕಳನ್ನು ತಪಾಸಣೆ ನಡೆಸಿ, ಯಾವುದೇ ಅಪಾಯ ಇಲ್ಲ ಎಂದು ತಿಳಿಸಿದ್ದಾರೆ. ಹಾಗಾಗಿ, ಅಸ್ವಸ್ಥಗೊಂಡಿದ್ದ ಮಕ್ಕಳನ್ನು ಮನೆಗೆ ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಉಪ್ಪಿಟ್ಟಿನೊಂದಿಗೆ ಚುರುಮುರಿ ಸೇವಿಸಿದ ಆರು ಮಂದಿ ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಈಗ ವಿದ್ಯಾರ್ಥಿಗಳೆಲ್ಲಾ ಗುಣಮುಖರಾಗಿದ್ದಾರೆ ಎಂದು ಡಿಎಚ್‌ಒ ಡಾ. ಎಸ್.ಎಸ್. ನೀಲಗುಂದ ಮಾಹಿತಿ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!