ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ: DCM ಇದೇನಾ ಬ್ರ್ಯಾಂಡ್ ಬೆಂಗಳೂರು, ಜೆಡಿಎಸ್ ಕಿಡಿ!

0
Spread the love

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರೀ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿ ಆಗಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ x ಮಾಡಿರುವ ಜೆಡಿಎಸ್, ಡಿಸಿಎಂ ಇದೇನಾ ಬ್ರ್ಯಾಂಡ್ ಬೆಂಗಳೂರು? ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ! ಎಂದು ಎಕ್ಸ್​ನಲ್ಲಿ ಬರೆದು ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ಟ್ಯಾಗ್ ಮಾಡಿ ಕೆಂಡಕಾರಿದೆ.​ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು? ಉತ್ತರಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೇ.

Advertisement

ಕೇವಲ 3-4 ಗಂಟೆ ಸುರಿದ ಮಳೆಗೆ ಬೆಂಗಳೂರು ಬಹುತೇಕ ಜಲಾವೃತವಾಗಿದೆ. ರಾಜಧಾನಿಯ ಹಲವೆಡೆ ಮನೆಗಳಿಗೆ, ಅಪಾರ್ಟ್ ಮೆಂಟ್​ಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡುತಿದ್ದಾರೆ. ಇನ್ನು ಸಿಲಿಕಾನ್ ಸಿಟಿಯ ಬಹುತೇಕ ರಸ್ತೆಗಳು, ಅಂಡರ್ ಪಾಸ್​ಗಳು ಸ್ವಿಮ್ಮಿಂಗ್ ಪೂಲ್ ಆಗಿದೆ, ರಸ್ತೆಗಳು ಕರೆಯಂತಾಗಿದ್ದು, ಹಳ್ಳ, ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ಚಲಿಸುವುದು ವಾಹನ ಸವಾರರಿಗೆ ನರಕ ಸದೃಶ್ಯವಾಗಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೇ ಆಸ್ತಿ ತೆರಿಗೆ ಏರಿಸಿ, ಸಾವಿರ ಕೋಟಿಗೂ ಹೆಚ್ಚು ಸಂಗ್ರಹಿಸಿರುವ ಹಣ ಏನಾಗಿದೆ? ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಮಾಡಲು ನೀವು ತೋರಿದ ಉತ್ಸಾಹ, ಈಗ ” ಬ್ರ್ಯಾಂಡ್ ಬೆಂಗಳೂರು” ಮಾಡ್ತೀವಿ ಎಂದು ಬರೀ ಸುಳ್ಳುಗಳನ್ನು ಹೇಳುತ್ತಲೇ ಬೆಂಗಳೂರಿನ ಜನರಿಗೆ ಮಂಕುಬೂದಿ ಎರಚುತ್ತಿದ್ದೀರಿ ಅಷ್ಟೇ. ನಿಮ್ಮ ಭ್ರಷ್ಟ ಕಾಂಗ್ರೆಸ್ ಸರ್ಕಾರ ಹಗರಣಗಳಲ್ಲೇ ಮುಳುಗಿರುವಾಗ ಜನಸಮಾನ್ಯರ ಬಗ್ಗೆ ಯೋಚಿಸಲು ಸಮಯ ಎಲ್ಲಿದೆ? ಎಂದು ಜೆಡಿಎಸ್ ಟ್ವೀಟ್ ಮಾಡಿ ಕಿಡಿಕಾರಿದೆ.


Spread the love

LEAVE A REPLY

Please enter your comment!
Please enter your name here