ಸಮಸ್ಯೆಗಳ ವರದಿ ಸರಕಾರಕ್ಕೆ ಸಲ್ಲಿಕೆ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 18 ವಾರ್ಡ್ಗಳಲ್ಲಿ ಈಗಾಗಲೇ ವಾರ್ಡ್ ಸಭೆ ನಡೆಸಲಾಗಿದ್ದು, ಸಂಬಂಧಿಸಿದ ವಾರ್ಡ್ನ ಸದಸ್ಯರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸಿದ ಸಮಸ್ಯೆಗಳ ಪಟ್ಟಿಯನ್ನು ಫೋಟೋ ಮತ್ತು ವಿಡಿಯೋ ಸಮೇತ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಮುಖ್ಯಾಧಿಕಾರಿ ಸವಿತಾ ತಾಂಬ್ರೆ ಹೇಳಿದರು.

Advertisement

ಅವರು ಸೋಮವಾರ ಶಿರಹಟ್ಟಿಯ ಸಾಮರ್ಥ್ಯ ಸೌಧದಲ್ಲಿ ನಡೆದ ಪ.ಪಂ ವಿಶೇಷ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.

2025-26ನೇ ಸಾಲಿನ ಎಸ್‌ಎಫ್‌ಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಅನುದಾನದಡಿಯಲ್ಲಿ ಶಿರಹಟ್ಟಿ ಪ.ಪಂ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಜಮೀನಿನಲ್ಲಿ ಬೋರ್‌ವೆಲ್ ಕೊರೆಯಿಸುವುದಕ್ಕಾಗಿ 3 ಲಕ್ಷ, ಪ.ಪಂ ವ್ಯಾಪ್ತಿಯಲ್ಲಿ ಬ್ಲ್ಯಾಕ್ ಸ್ಪಾಟ್‌ಗಳಿಗೆ ಸಿಸಿ ಕ್ಯಾಮರಾ ಅಳವಡಿಸುವುದಕ್ಕಾಗಿ 12.80 ಲಕ್ಷ, ವಾ.ನಂ. 15ರ ಅಂಬೇಡ್ಕರ್ ಸಮುದಾಯ ಭವನದ ಹತ್ತಿರ ಸಿಸ್ಟರ್ನ್ ಟ್ಯಾಂಕ್ ಅಳವಡಿಸಿ ನೀರು ಸರಬರಾಜು ಮಾಡುವುದು 2.56 ಲಕ್ಷ ಹೀಗೆ ಒಟ್ಟು 29.32 ಲಕ್ಷ ರೂ.ಗಳಿಗೆ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು ಎಂದರು.

ಪ.ಪಂ ಅಧ್ಯಕ್ಷೆ ದೇವಕ್ಕ ಗುಡಿಮನಿ, ಉಪಾಧ್ಯಕ್ಷೆ ನೀಲವ್ವ ಹುಬ್ಬಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ ಹೊನ್ನಪ್ಪ ಶಿರಹಟ್ಟಿ, ಸದಸ್ಯರಾದ ಸಂದೀಪ ಕಪ್ಪತ್ತನವರ, ಅಶ್ರತಅಲಿ ಢಾಲಾಯತ, ಇಂಜಿನಿಯರ್ ಕಾಟೇವಾಲ್ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here