ಕುಮಾರಸ್ವಾಮಿ ಮನವೊಲಿಸುವಲ್ಲಿ ಸಕ್ಸಸ್: ಜೆಡಿಎಸ್-ಬಿಜೆಪಿಯಿಂದ ಪಾದಯಾತ್ರೆ ಫಿಕ್ಸ್!

0
Spread the love

ದೆಹಲಿ:- ಪಾದಯಾತ್ರೆ ಬಗ್ಗೆ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಮುನಿಸಿಕೊಂಡಿದ್ದ ಕುಮಾರಸ್ವಾಮಿ ಅವರು ಜೆಡಿಎಸ್ ನಿಂದ ಪಾದಯಾತ್ರೆಗೆ ಬೆಂಬಲವಿಲ್ಲ ಎಂದು ಘೋಷಿಸಿದರು.

Advertisement

ಈ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಮಧ್ಯ ಪ್ರವೇಶಿಸಿ ಕುಮಾರಸ್ವಾಮಿ ಮಾನವೊಲಿಸುವಲ್ಲಿ ಸಕ್ಸಸ್ ಆಗಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಜೆಡಿಎಸ್-ಬಿಜೆಪಿಯಿಂದ ಮೈಸೂರು ಪಾದಯಾತ್ರೆ ಫಿಕ್ಸ್​ ಆಗಿದೆ. ಈ ಬಗ್ಗೆ ದೆಹಲಿಯಲ್ಲಿಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಉಸ್ತುವಾರಿ ರಾಧಾಮೋಹನ್ ದಾಸ್, ಬಿವೈ ವಿಜಯೇಂದ್ರ ಜಂಟಿ ಸದ್ದಿಗೋಷ್ಠಿ ನಡೆಸಿ, ಬೆಂಗಳೂರು ಟು ಮೈಸೂರು ಪಾದಯಾತ್ರೆ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಕಾರಣಕ್ಕಾಗಿ ಕೆಂಡಾಮಂಡಲರಾಗಿದ್ದ ಕುಮಾರಸ್ವಾಮಿ, ನಮ್ಮ ಕುಟುಂಬದಲ್ಲಿ ವಿಷ ಹಾಕಿದವನ ನೇತೃತ್ವದಲ್ಲಿ ಪಾದಯಾತ್ರೆಗೆ ನಮ್ಮ ಬೆಂಬಲವಿಲ್ಲ ಎಂದು ಖಾರವಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸಬೇಕಿದ್ದ ಮುಡಾ ಸೈಟ್ ಕುರಿತಾದ ಮೈಸೂರು ಚಲೋ ರದ್ದಾಗಬಹುದಾದ ಸನ್ನಿವೇಶ ಸೃಷ್ಟಿಯಾಗಿತ್ತು. ಇದೀಗ ಅಂತಿಮವಾಗಿ ವಿಜಯೇಂದ್ರ, ರಾಧಾಮೋಹನ್ ದಾಸ್, ಪ್ರಲ್ಹಾದ್ ಜೋಶಿ ಇಂದು ಸಂಸತ್ ಭವನದಲ್ಲಿ ಕುಮಾರಸ್ವಾಮಿ ಜೊತೆ ಸಂಧಾನ ಸಭೆ ಮಾಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಕುಮಾರಸ್ವಾಮಿ ಅವರಿಂದಲೇ ಈ ಪಾದಯಾತ್ರೆಗೆ ಚಾಲನೆ ಕೊಡಿಸಲು ತೀರ್ಮಾನಿಸಿದ್ದಾರೆ

ಸದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಶನಿವಾರ ಮೈಸೂರಿಗೆ ಪಾದಯಾತ್ರೆ ಆರಂಭವಾಗಲಿದೆ. ಸಣ್ಣಪುಟ್ಟ ಗೊಂದಲ ಇದ್ದರೂ ಪಾದಯಾತ್ರೆ ನಡೆಯುತ್ತೆ. ಶನಿವಾರ ಬೆಳಗ್ಗೆ 8.30ಕ್ಕೆ‌ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಆರಂಭಗೊಳುತ್ತದೆ. ಕುಮಾರಸ್ವಾಮಿಯೇ ಪಾದಯಾತ್ರೆಗೆ ಚಾಲನೆ ನೀಡುತ್ತಾರೆ. ಭ್ರಷ್ಟಾಚಾರ ಆಗಿದ್ದನ್ನ ಸದನದಲ್ಲಿ ಸಿಎಂ ಒಪ್ಕೊಂಡಿದ್ದಾರೆ. 4 ಸಾವಿರ ಕೋಟಿ ರೂ. ಬೆಲೆಬಾಳುವ ಸೈಟ್​​ ಕೊಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.


Spread the love

LEAVE A REPLY

Please enter your comment!
Please enter your name here