ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರ, ಯೋಗ ದಸರಾ ಉಪಸಮಿತಿ ಮೈಸೂರು ಇವರು ಇತ್ತೀಚೆಗೆ ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದ ಸಿ. ಕಾಳಿಂಗರಾವ್ ಸಭಾಂಗಣದಲ್ಲಿ ನಡೆಸಿದ ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಯಲ್ಲಿ ಬಸವ ಯೋಗ ಮಹಾವಿದ್ಯಾಲಯದ ಪ್ರಾಚಾರ್ಯ ಕೆ.ಎಸ್. ಪಲ್ಲೇದ ಇವರು 65 ವರ್ಷ ಮೇಲ್ಪಟ್ಟ ಪುರುಷರ ವಿಭಾಗದಲ್ಲಿ ಭಾಗವಹಿಸಿ 5ನೇ ಸ್ಥಾನ ಪಡೆದಿದ್ದಾರೆ.
Advertisement
ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಯಲ್ಲಿ ಯಶಸ್ಸು ಗಳಿಸಿದ ಕೆ.ಎಸ್. ಪಲ್ಲೇದ ಅವರಿಗೆ ಎಸ್.ವಾಯ್.ಬಿ.ಎಂ.ಎಸ್ ಯೋಗಪಾಠಶಾಲೆಯ ಬಸವ ಯೋಗ ಮಹಾವಿದ್ಯಾಲಯದ ಆಡಳಿತಾಧಿಕಾರಿಗಳಾದ ಎಸ್.ಎಸ್. ಪಟ್ಟಣಶೆಟ್ಟಿ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ವೃಂದ, ಡಾ. ಎಸ್.ಕೆ. ನಾಲತ್ವಾಡಮಠ, ಡಾ. ಎಂ.ವಿ. ಐಹೊಳ್ಳಿ, ವಿ.ಎಚ್. ಪಾಟೀಲ, ಶಿವನಗೌಡ ಗೌಡರ ಸೇರಿದಂತೆ ಅಭಿಮಾನಿ ಬಂಧುಗಳು ಶುಭ ಹಾರೈಸಿದ್ದಾರೆ.