ಸತತ ಪರಿಶ್ರಮದಿಂದ ಸಾಧನೆ ಸಾಧ್ಯ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕ್ರೀಡೆ ಪ್ರತಿಯೊಬ್ಬ ವ್ಯಕ್ತಿಗೂ ಅವಶ್ಯಕವಾಗಿದ್ದು, ಆರೋಗ್ಯಕರ ಜೀವನಕ್ಕೆ ಉತ್ತಮ ವ್ಯಾಯಾಮ ನೀಡುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಹಜವಾಗಿ ಸ್ವೀಕರಿಸಬೇಕು. ಸತತ ಪರಿಶ್ರಮದಿಂದ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಕೆಟ್ಟ ಚಟಗಳಿಗೆ ಬಲಿಯಾಗದೇ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ, ತರಬೇತಿದಾರ ಸುನೀಲ ಜೋಶಿ ಹೇಳಿದರು.

Advertisement

ಅಖಿಲ ಕರ್ನಾಟಕ ವಾಣಿಜ್ಯೋದ್ಯಮಿಗಳ ಸಮ್ಮೇಳನ, ಕೈಗಾರಿಕಾ ವಸ್ತುಪ್ರದರ್ಶನ ಹಾಗೂ ಮಾರಾಟಗಳ `ಗದಗ ಉತ್ಸವ-2025’ ಅಂಗವಾಗಿ ಹಮ್ಮಿಕೊಂಡಿದ್ದ ಕ್ರಿಕೆಟ್ ಟೂರ್ನಾಮೆಂಟ್‌ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ ಮಾತನಾಡಿ, ನಾವು ನಮ್ಮ ಆರೋಗ್ಯ ವೃದ್ಧಿಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅವಶ್ಯವಾಗಿದೆ. ಮೊದಲು ನಾವು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಸಂಸ್ಥೆಯವರು ಸುವರ್ಣ ಮಹೋತ್ಸವದ ಅಂಗವಾಗಿ ಕ್ರೀಡಾ ಚಟುವಟಿಕೆಯನ್ನು ಏರ್ಪಡಿಸಿರುವುದು ಪ್ರಶಂಸನೀಯ ಎಂದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ಮಾತನಾಡಿ, ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಿ ಇರಲು ಸಾಧ್ಯವಾಗುತ್ತದೆ. ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯವರು ವ್ಯಾಪಾರ ಮತ್ತು ಉದ್ದಿಮೆಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗದಗ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

ಮತ್ತೋರ್ವ ಮುಖ್ಯ ಅತಿಥಿಗಳಾದ ಆಗಮಿಸಿದ ಗದಗ ನಗರದ ಮೂತ್ರಪಿಂಡ ಹಾಗೂ ಮೂತ್ರರೋಗ ಶಸ್ತçಚಿಕಿತ್ಸಕರಾದ ಡಾ. ಶರಣ ಬಿ.ಆಲೂರ ಮಾತನಾಡಿ, ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ. ಅದನ್ನು ಕಾಪಾಡಿಕೊಳ್ಳಲು ಇಂತಹ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.

ಕ್ರೀಡಾ ಕೂಟದ ಚೇರಮನ್ ಶರಣು ವ್ಹಿ.ಗದಗ ಸ್ವಾಗತಿಸಿದರು. ಕ್ರಿಕೆಟ್ ಪಂದ್ಯದಲ್ಲಿ ವಿಜೇತರಾದ ಗ್ರೇನ್ ಮಾರ್ಕೆಟ್ ತಂಡದ ಅಧ್ಯಕ್ಷ ರಾಜಣ್ಣ ಮಲ್ಲಾಡದ ಹಾಗೂ ದ್ವಿತೀಯ ಬಹುಮಾನವನ್ನು ಎ.ಪಿ.ಎಂ.ಸಿ ತಂಡದ ನಾಯಕ ಶಂಬು ಪಟ್ಟದಕಲ್ಲು ಅವರಿಗೆ ಸುನೀಲ ಜೋಶಿ ಟ್ರೋಫಿ ನೀಡಿ ಸನ್ಮಾನಿಸಿ ಗೌರವಿಸಿದರು.

ಗದಗ ಉತ್ಸವ-2025ರ ಚೇರಮನ್ ಆನಂದ ಎಲ್.ಪೊತ್ನೀಸ್, ಕ್ರಿಕೆಟ್ ತರಬೇತುದಾರ ಪ್ರೊ. ಎಸ್.ಎಲ್. ಗುಳೇದಗುಡ್ಡ, ಕ್ರೀಡಾ ಉಪಸಮಿತಿ ಚೇರಮನ್ ಪ್ರಮೋದ್ ವಾರಕರ ಉಪಸ್ಥಿತರಿದ್ದರು. ಕ್ರಿಕೆಟ್ ಪಂದ್ಯಾವಳಿಯನ್ನು ಸೋಮು ಅಂಗಡಿ ನಿರ್ವಹಿಸಿದರು. ಸಂಸ್ಥೆಯ ಸದಸ್ಯ ರಮೇಶ ಶಿಗ್ಲಿ ಪ್ರಾರ್ಥಿಸಿದರು. ಉಪ ಸಮಿತಿ ಚೇರಮನ್ ಶರಣು ವ್ಹಿ.ಗದಗ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಅಶೋಕಗೌಡ ಕೆ.ಪಾಟೀಲ ನಿರೂಪಿಸಿದರು. ಸಂಸ್ಥೆಯ ಉಪಾಧ್ಯಕ್ಷ ಶರಣಬಸಪ್ಪ ಎಸ್.ಗುಡಿಮನಿ ವಂದಿಸಿದರು ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಅಶೋಕಗೌಡ ಕೆ.ಪಾಟೀಲ ತಿಳಿಸಿದ್ದಾರೆ.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ತಾತನಗೌಡ ಎಸ್.ಪಾಟೀಲ ಮಾತನಾಡಿ, ನಮ್ಮ ಸಂಸ್ಥೆಯ ಸದಸ್ಯರು ಒತ್ತಡದ ಬದುಕಿನಿಂದ ಕೇವಲ ವ್ಯಾಪಾರದ ಕಡೆಗೆ ಗಮನ ವಹಿಸುತ್ತಾ ಬರುತ್ತಾರೆ. ಈ ನಿಟ್ಟಿನಲ್ಲಿ ವ್ಯಾಪಾರಸ್ಥರ ಆರೋಗ್ಯದ ಕಡೆಗೆ ಗಮನ ನೀಡುವುದರೊಂದಿಗೆ ಅವರನ್ನು ಮಾಸಿಕ ಹಾಗೂ ದೈಹಿಕ ಒತ್ತಡದ ಜೀವನದಿಂದ ಹೊರತರುವ ಉದ್ದೇಶದಿಂದ ಸಂಸ್ಥೆಯಿಂದ ಪ್ರಪ್ರಥಮವಾಗಿ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here