HomeGadag Newsಸಮುದಾಯ ಬದು ನಿರ್ಮಾಣ ಕಾಮಗಾರಿಯ ಯಶಸ್ಸು: ರೈತರ ಮೊಗದಲ್ಲಿ ಸಂತಸ

ಸಮುದಾಯ ಬದು ನಿರ್ಮಾಣ ಕಾಮಗಾರಿಯ ಯಶಸ್ಸು: ರೈತರ ಮೊಗದಲ್ಲಿ ಸಂತಸ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಬಹುಪಾಲು ರೈತರ ಜಮೀನುಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಂದಕ ಬದು ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗೆ ಕೆಲವು ಗ್ರಾಮಗಳಲ್ಲಿ ಸುರಿದ ಸುರಿದ ಮಳೆಗೆ ಕಂದಕಗಳಲ್ಲಿ ನೀರು ತುಂಬಿಕೊಂಡಿರುವುದು ಯೋಜನೆಗೆ ಶ್ರಮಿಸಿದ ರೈತರ ಮೊಗದಲ್ಲಿ ಸಂತಸ ಚಿಮ್ಮುವಂತೆ ಮಾಡಿದೆ.

ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಜನರ ಅಭಿವೃದ್ಧಿಗೆ ಇರುವ ಪ್ರಮುಖ ಯೋಜನೆಯಾಗಿದೆ. ಇದು ರೈತರಿಗೆ ವರದಾನವಾಗುವುದರ ಜೊತೆಗೆ ಜಮೀನಿನ ಫಲವತ್ತತೆ ಹೆಚ್ಚಳಕ್ಕೆ ಪೂರಕವಾಗಿದೆ. ಇದರಲ್ಲಿ ಗ್ರಾಮೀಣರು ವೈಯಕ್ತಿಕ ಕಾಮಗಾರಿಗಳ ಮೂಲಕ ತಮ್ಮ ಜಮೀನಿನಲ್ಲಿ ವಿವಿಧ ಅರಣ್ಯ, ತೋಟಗಾರಿಕೆ, ರೇಷ್ಮೆ ಬೆಳೆ ಬೆಳೆಯಬಹುದು. ಇಲ್ಲವೇ ಸಮುದಾಯ ಕಾಮಗಾರಿಯಲ್ಲಿ ಪಾಲ್ಗೊಂಡು ದಿನಕ್ಕೆ 370 ರೂ. ಕೂಲಿ ಪಡೆಯಬಹುದಾಗಿದೆ.

ಗದಗ ತಾಲೂಕು ಪಂಚಾಯಿತಿ ವ್ಯಾಪ್ತಿಯ ಅಡವಿಸೋಮಾಪುರ, ಬಿಂಕದಕಟ್ಟಿ, ಕುರ್ತಕೋಟಿ, ಲಕ್ಕುಂಡಿ, ಬೆಳಹೋಡ, ಅಂತೂರ, ಬಳಗಾನೂರ, ಹರ್ಲಾಪೂರ, ತಿಮ್ಮಾಪುರ, ಹುಯಿಲಗೋಳ, ಹುಲಕೋಟಿ, ಕದಡಿ, ನಾಗಾವಿ, ಬೆಳದಡಿ ಸೇರಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸಮುದಾಯ ಬದು ನಿರ್ಮಾಣ ಕಾಮಗಾರಿಗಳು ಪ್ರಾರಂಭವಾಗಿದ್ದು, ನಿತ್ಯ 10 ಸಾವಿರಕ್ಕೂ ಹೆಚ್ಚು ಜನರು ಕೆಲಸದಲ್ಲಿ ತೊಡಗಿದ್ದಾರೆ.

ಎನ್‌ಆರ್‌ಇಜಿಎ ಯೋಜನೆಯಡಿ ಮಹಿಳೆ, ಪುರುಷ ಎಂಬ ಭೇದವಿಲ್ಲದೆ ಎಲ್ಲರಿಗೂ ಸಮಾನ ಕೂಲಿ ಹಣ ನೀಡಲಾಗುತ್ತದೆ. 349 ರೂ. ಇದ್ದ ಕೂಲಿ ದರವನ್ನು ಎಪ್ರಿಲ್ 1ರಿಂದ 370 ರೂ.ಗೆ ಹೆಚ್ಚಿಸಲಾಗಿದೆ. ತಾಲೂಕಿನ ಗ್ರಾಮೀಣ ಜನರು ಬೇಸಿಗೆಯ ಕನಿಷ್ಠ 50 ದಿನಗಳ ಕಾಲ ಕೆಲಸ ನಿರ್ವಹಿಸಿದರೆ 18500 ರೂ ಹಣ ನೇರವಾಗಿ ಕೂಲಿಕಾರರ ಉಳಿತಾಯ ಖಾತೆಗೆ ಪಾವತಿಯಾಗಲಿದೆ. ತಮ್ಮದೇ ಕುಟುಂಬ ಸದಸ್ಯರು ಕೂಡಿಕೊಂಡು ಕೆಲಸ ಮಾಡಿ ಹಣ ಪಡೆಯಬಹದಾಗಿದೆ. ಈ ಹಣವನ್ನು ಕುಟುಂಬದ ಸಣ್ಣ-ಪಟ್ಟು ಅಗತ್ಯತೆ, ಮಕ್ಕಳ ಮುಂದಿನ ವ್ಯಾಸಂಗಕ್ಕೆ ಬಳಕೆ ಮಾಡಿಕೊಳ್ಳಬಹುದಾಗಿದೆ. ಜೊತೆಗೆ ಮುಂಗಾರು ಬೆಳೆ ಬೆಳೆಯಲು ಗೊಬ್ಬರ, ಬೀಜ ಮತ್ತು ಜಮೀನಿನ ಇನ್ನಿತರ ಕೆಲಸ ಕಾರ್ಯಗಳಿಗೆ ಇದನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ.

ತಾಲೂಕಿನ ಗ್ರಾಮೀಣ ಜನರಿಗೆ ಅವರ ಗ್ರಾಮದಲ್ಲಿಯೇ ಉದ್ಯೋಗ ನೀಡಲು ಮನರೇಗಾ ಯೋಜನೆಯಡಿ ಕೆಲಸ ನೀಡಲು ಸಮುದಾಯ ಬದು ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಇದರಿಂದ ಗ್ರಾಮೀಣರು ಉದ್ಯೋಗ ಅರಿಸಿ ವಲಸೆ ಹೋಗುವುದನ್ನು ನಿಲ್ಲಿಸಿ ತಮ್ಮ ಗ್ರಾಮದಲ್ಲಿಯೇ ಉದ್ಯೋಗ ಖಾತ್ರಿಯಲ್ಲಿ ಕೆಲಸ ಪಡೆಯಬಹುದಾಗಿದೆ.

ಜಮೀನಿನಲ್ಲಿ ಬದು ನಿರ್ಮಾಣ ಮಾಡಿಕೊಳ್ಳುವುದರಿಂದ ಮಳೆಗಾಲದಲ್ಲಿ ಆಗುವ ಅನುಕೂಲಗಳ ಕುರಿತು ರೈತರಿಗೆ ಮಾಹಿತಿ ನೀಡಲಾಗಿದೆ. ಮಣ್ಣು ಮತ್ತು ನೀರು ಸಂರಕ್ಷಣೆಗೆ ಬದು ನಿರ್ಮಾಣ ಉತ್ತಮ ಯೋಜನೆಯಾಗಿದೆ. ಇದರಿಂದ ರೈತರ ಜಮೀನಿನ ಫಲವತ್ತತೆ ಹೆಚ್ಚಳವಾಗುವುದರ ಜೊತೆಗೆ ಸಣ್ಣ, ಅತಿ ಸಣ್ಣ ರೈತರು ದಿನಕ್ಕೆ 370 ರೂ. ಕೂಲಿ ಪಡೆಯಬಹುದಾಗಿದೆ. ರೈತರು ತಮ್ಮ ಜಮೀನನಲ್ಲಿ ಬದು ನಿರ್ಮಿಸಿಕೊಳ್ಳಲು ಮುಂದಾಗಬೇಕು.

– ಮಲ್ಲಯ್ಯ ಕೊರವನವರ.

ಕಾರ್ಯನಿರ್ವಾಹ ಅಧಿಕಾರಿ,

ತಾ.ಪಂ ಗದಗ.

“ತಾಲೂಕಿನ ಬಹುತೇಕ ಗ್ರಾಮ ಪಂಚಾಯಿತಿ ಹಾಗೂ ಗ್ರಾಮಗಳಲ್ಲಿ ಬದು ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಎನ್‌ಎಂಎಂಎಸ್ ತಂತ್ರಾಂಶದ ಮೂಲಕ ಎರಡು ಬಾರಿ ಹಾಜರಾತಿ ಹಾಕುವುದು ಕಡ್ಡಾಯವಾಗಿದೆ. ಅಳತೆಗನುಸಾರ ಕೆಲಸ ಮಾಡಿದಾಗ ಮಾತ್ರ ಪ್ರತಿ ವ್ಯಕ್ತಿಗೆ 370ರೂ. ಸಮಾನವಾಗಿ ಕೂಲಿ ನೀಡಲಾಗುತ್ತದೆ. ಹೆಚ್ಚಿನ ಸಂಖ್ಯೆಯ ರೈತರು ಈ ಯೋಜನೆಯ ಲಾಭ ಪಡೆಯಬೇಕು.”

– ಕುಮಾರ ಪೂಜಾರ.

ಸಹಾಯಕ ನಿರ್ದೇಶಕರು (ಉಖಾ),

ತಾ.ಪಂ ಗದಗ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!