Pahalgam Attack: ಭಾರತದಲ್ಲಿ ಇಂತಹ ಕೃತ್ಯಗಳು ಮರುಕಳಿಸದಿರಲಿ: ಉಗ್ರರ ದಾಳಿ ಖಂಡಿಸಿದ ಶಿವಣ್ಣ

0
Spread the love

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲ್ಪಡುವ ಪ್ರವಾಸಿ ತಾಣ ಬೈಸರನ್‌ನಲ್ಲಿ ನಿನ್ನೆ ಉಗ್ರರು ದಾಳಿ ಮಾಡಿದ್ದಾರೆ. ಈ ಕೃತ್ಯವನ್ನು ಇಡೀ ದೇಶವೇ ಖಂಡಿಸಿದೆ. ಹಲವು ಸಿನಿಮಾ ಸೆಲೆಬ್ರಿಟಿಗಳು ಸಹ ಕೃತ್ಯವನ್ನು ಖಂಡಿಸಿದ್ದಾರೆ. ಅದರಂತೆ ಈ ಹೇಯ ಕೃತ್ಯದ ಬಗ್ಗೆ ಶಿವಣ್ಣ ಖಂಡಿಸಿದ್ದಾರೆ.

Advertisement

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸುತ್ತೇನೆ. ಶಾಂತಿ ಸೌಹಾರ್ದದ ಭಾರತದಲ್ಲಿ ಇಂತಹ ಕೃತ್ಯಗಳು ಮರುಕಳಿಸದಿರಲಿ. ಹಾಗೆಯೇ ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಲಿ ಮತ್ತು,

ನಮ್ಮನ್ನು ಅಗಲಿದ ಎಲ್ಲಾ ಭಾರತೀಯರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕೋರುತ್ತಾ ಎಲ್ಲಾ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಹಾಗೂ ಧೈರ್ಯವನ್ನು ದೇವರು ನೀಡಲಿ. ಈ ಪೈಶಾಚಿಕ ಕೃತ್ಯ ಎಸಗುವವರ ವಿರುದ್ಧದ ಸರ್ಕಾರದ ಹೋರಾಟಕ್ಕೆ ಸದಾ ಬೆಂಬಲವಿರುತ್ತದೆ ಎಂದು ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here