ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಲಾಡು ತಯಾರಿಸುವ ಕೋಣೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
Advertisement
ಮಹದೇಶ್ವರ ದೇಗುಲದ ಹಿಂಭಾಗದಲ್ಲೇ ಇರುವ ಲಾಡು ತಯಾರಿಸುವ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆ ಅಲ್ಲಿನ ಸಿಬ್ಬಂದಿ ಹೊರಗೆ ಓಡಿ ಬಂದಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ವರದಿಯಾಗಿಲ್ಲ.