ಅಭಿನಯ ಚಕ್ರವರ್ತಿ, ಬಾದ್ ಷಾ ಕಿಚ್ಚ ಸುದೀಪ್ ಅವರು 52ನೇ ವಸಂತಕ್ಕೆ ಕಾಲಿಟ್ಟ ಹಿನ್ನೆಲೆ ಅವರ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ.
ಸಾಲು ಸಾಲು ಸಿನಿಮಾಗಳ ಶೂಟಿಂಗ್ನಲ್ಲಿ ಬ್ಯುಸಿ ಇರೋ ಕಿಚ್ಚ ಸುದೀಪ್ ಅವರ ಮುಂದಿನ ಪ್ಯಾನ್ ಇಂಡಿಯಾ ಸಿನಿಮಾದ ಟೈಟಲ್ ಅನೌನ್ಸ್ ಆಗಿದೆ. ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಒಂದಿನ ಮೊದಲೇ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ. ಸದ್ಯ ಈ ಮೂವಿಯ ಶೂಟಿಂಗ್ ಎಲ್ಲ ಪೂರ್ಣವಾಗಿದ್ದು, ಟೈಟಲ್ ಮಾತ್ರ ಘೋಷಣೆ ಮಾಡಿರಲಿಲ್ಲ. ಈವರೆಗೂ ಕೆ-47 ಎನ್ನುವ ಹೆಸರಿನಲ್ಲೇ ಶೂಟಿಂಗ್ ಮಾಡಿ ಪೂರ್ಣಗೊಳಿಸಲಾಗಿದೆ. ಕಿಚ್ಚನ ಹೊಸ ಸಿನಿಮಾ ರಿಲೀಸ್ಗೂ ರೆಡಿಯಾಗಿದ್ದು, ಡಿಸೆಂಬರ್ನಲ್ಲಿ ಅಂದರೆ ಕ್ರಿಸ್ಮಸ್ಗೆ ಅಭಿಮಾನಿಗಳು ಈ ಸಿನಿಮಾವನ್ನು ಬಿಗ್ ಸ್ಕ್ರೀನ್ನಲ್ಲಿ ನೋಡಬಹುದಾಗಿದೆ.
ಹೆಸರಿಡದ ಈ ಸಿನಿಮಾದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಅದರಂತೆ ಕಿಚ್ಚನ ಬರ್ತ್ಡೇಗೂ ಒಂದಿನ ಮೊದಲೇ ಮೂವಿಯ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿದೆ.



