ಶುಗರ್ ಕಾರ್ಖಾನೆ ಸ್ಫೋಟಕ ಪ್ರಕರಣ: ಮುರುಗೇಶ್‌ ನಿರಾಣಿ ಪುತ್ರನಿಗೆ ಬಿಗ್ ಶಾಕ್ ಕೊಟ್ಟ‌ ಸುಪ್ರೀಂ!

0
Spread the love

ನವದೆಹಲಿ:- ಮಾಜಿ ಸಚಿವ ಮುರುಗೇಶ್ ನಿರಾಣಿಯವರ ಪುತ್ರ ವಿಜಯ್ ನಿರಾಣಿ ವಿರುದ್ಧದ ಶುಗರ್ ಕಾರ್ಖಾನೆ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.

Advertisement

2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ಫೋಟ ಸಂಭವಿಸಿ ಆರು ಜನ ಕಾರ್ಮಿಕರು ಸಾವಿಗೀಡಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ನಿರಾಣಿ ವಿರುದ್ಧ ಕಾನೂನು ಪ್ರಕಾರ ತನಿಖೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ಫೋಟಕ ಸಂಭವಿಸಿ ಆರು ಜನ ಕಾರ್ಮಿಕರು ಸಾವಿಗೀಡಾಗಿದ್ದರು. ಆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ 2023ರಲ್ಲಿ ಬ್ರೇಕ್ ಹಾಕಿತ್ತು. ಆದರೆ, ಈ ಆದೇಶದ ವಿರುದ್ಧ ರಾಜ್ಯ ಸರ್ಕಾರ, ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು. ಇದೀಗ ಸುಪ್ರಿಂಕೋರ್ಟ್​, ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ ತನಿಖೆಗೆ ಆದೇಶಿಸಿದೆ.


Spread the love

LEAVE A REPLY

Please enter your comment!
Please enter your name here