ಬೆಳಗಾವಿ:- ಪ್ರತಿ ಟನ್ ಕಬ್ಬಿಗೆ 3,500 ರೂ. ದರ ಘೋಷಣೆಗೆ ಒತ್ತಾಯಿಸಿ ಬೆಳಗಾವಿಯ ರೈತರು 8 ದಿನಗಳಿಂದ ಗುರ್ಲಾಪುರ ಕ್ರಾಸ್‌ನಲ್ಲಿ ನಿರಂತರ ಅಹೋರಾತ್ರಿ ಹೋರಾಟ ನಡೆಸುತ್ತಿದ್ದಾರೆ.
ಹೋರಾಟವು ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರೈತರು ತಮ್ಮ ಬೇಡಿಕೆಯನ್ನು ತಲುಪಿಸುವಂತೆ ಸರ್ಕಾರದ ಮೇಲ್ವಿಚಾರಣೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿದ್ರು. 8ನೇ ದಿನಕ್ಕೆ ಆಗಮಿಸಿದ ಸಚಿವರನ್ನು ಕಂಡ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಚಿವರ ಕಾರಿಗೆ ಚಪ್ಪಲಿ ಎಸೆಯುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಟನ್ ಕಬ್ಬಿಗೆ 3,500 ರೂಪಾಯಿ ನೀಡಬೇಕು ಎಂಬುವುದು ರೈತರ ಆಗ್ರಹವಾಗಿದೆ. ರೈತರ ಹೋರಾಟಕ್ಕೆ ಬಿಜೆಪಿ, ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳು ಸೇರಿ ಎಲ್ಲರಿಂದಲೂ ಬೆಂಬಲ ವ್ಯಕ್ತವಾಗಿದೆ.


