HomeLife Styleಕಬ್ಬಿನ ಜ್ಯೂಸ್ ಎಲ್ಲರಿಗೂ ಒಳ್ಳೆಯದಲ್ಲ! ಈ ಆರೋಗ್ಯ ಸಮಸ್ಯೆ ಇದ್ದಲ್ಲಿ ಕುಡಿಯಬೇಡಿ

ಕಬ್ಬಿನ ಜ್ಯೂಸ್ ಎಲ್ಲರಿಗೂ ಒಳ್ಳೆಯದಲ್ಲ! ಈ ಆರೋಗ್ಯ ಸಮಸ್ಯೆ ಇದ್ದಲ್ಲಿ ಕುಡಿಯಬೇಡಿ

For Dai;y Updates Join Our whatsapp Group

Spread the love

ಬೇಸಿಗೆ ಕಾಲದಲ್ಲಿ ತಂಪು ನೀಡುವ ಜನಪ್ರಿಯ ಪಾನೀಯಗಳಲ್ಲೊಂದು ಕಬ್ಬಿನ ಜ್ಯೂಸ್ ಆಗಿದ್ದು, ಎಳನೀರು ಸೇರಿದಂತೆ ಇತರ ನೈಸರ್ಗಿಕ ಪಾನೀಯಗಳಂತೆ ಇದು ಹೆಚ್ಚು ಸೇವನೆಗೆ ಒಳಗಾಗುತ್ತದೆ.

ಆದರೆ ಕಬ್ಬಿನ ರಸ ಎಲ್ಲರಿಗೂ ಸುರಕ್ಷಿತವಲ್ಲ ಎಂಬ ವೈದ್ಯಕೀಯ ಎಚ್ಚರಿಕೆ ಇದೀಗ ಮತ್ತೆ ಗಮನ ಸೆಳೆದಿದೆ.

ಆರೋಗ್ಯ ತಜ್ಞರ ಪ್ರಕಾರ, ಕಬ್ಬಿನ ಜ್ಯೂಸ್‌ನಲ್ಲಿ ನೈಸರ್ಗಿಕ ಸಕ್ಕರೆ ಪ್ರಮಾಣ ಹೆಚ್ಚಿರುವುದರಿಂದ ಮಧುಮೇಹ ಇರುವವರು ಇದನ್ನು ಸೇವಿಸುವುದು ಅಪಾಯಕಾರಿ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತಕ್ಷಣ ಏರಿಸಬಹುದಾಗಿ ವೈದ್ಯರು ತಿಳಿಸಿದ್ದಾರೆ.

ಅತಿಯಾದ ತೂಕ (ಒಬಿಸಿಟಿ) ಇರುವವರು ಕೂಡ ಕಬ್ಬಿನ ಜ್ಯೂಸ್ ಸೇವನೆ ವೇಳೆ ಎಚ್ಚರಿಕೆ ವಹಿಸಬೇಕಾಗಿದೆ. ಹೆಚ್ಚಿನ ಕ್ಯಾಲೊರಿ ಇರುವುದರಿಂದ ತೂಕ ಹೆಚ್ಚುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ವಾರಕ್ಕೆ ಒಂದು ಬಾರಿ ಮಿತ ಪ್ರಮಾಣದಲ್ಲಿ ಮಾತ್ರ ಸೇವಿಸುವುದು ಸೂಕ್ತ ಎಂದು ಸಲಹೆ ನೀಡಲಾಗಿದೆ.

ಇದೇ ವೇಳೆ ಜೀರ್ಣಕ್ರಿಯೆ ಸಮಸ್ಯೆ, ಅಜೀರ್ಣ ಅಥವಾ ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಕಬ್ಬಿನ ಜ್ಯೂಸ್ ತಪ್ಪಿಸುವುದು ಉತ್ತಮ ಎಂದು ವೈದ್ಯರು ಸೂಚಿಸಿದ್ದಾರೆ. ಕೆಲವೊಮ್ಮೆ ಇದು ಹೊಟ್ಟೆಯ ಅಸೌಕರ್ಯವನ್ನು ಹೆಚ್ಚಿಸಬಹುದಾಗಿದೆ.

ವೈದ್ಯರ ಪ್ರಕಾರ, ಕಬ್ಬಿನ ಜ್ಯೂಸ್ ಸದಾ ತಾಜಾ ಹಾಗೂ ಸ್ವಚ್ಛವಾಗಿ ತಯಾರಿಸಿದದ್ದಾಗಿರಬೇಕು. ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದು ಹಾಗೂ ಅತಿಯಾದ ಪ್ರಮಾಣದಲ್ಲಿ ಕುಡಿಯುವುದನ್ನು ತಪ್ಪಿಸಬೇಕು ಎಂದು ಎಚ್ಚರಿಕೆ ನೀಡಲಾಗಿದೆ.

ಒಟ್ಟಿನಲ್ಲಿ ಬೇಸಿಗೆಯಲ್ಲಿ ತಂಪು ನೀಡುವ ಪಾನೀಯವಾಗಿದ್ದರೂ, ಕಬ್ಬಿನ ಜ್ಯೂಸ್ ಎಲ್ಲರಿಗೂ ಸಮಾನವಾಗಿ ಉಪಯುಕ್ತವಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಆರೋಗ್ಯ ಸಮಸ್ಯೆಗಳಿರುವವರು ವೈದ್ಯರ ಸಲಹೆಯ ನಂತರವೇ ಇದನ್ನು ಸೇವಿಸುವುದು ಸೂಕ್ತ ಎಂದು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!