ಮಂಗಳೂರು:- ಗುರುವಾರ ರಾತ್ರಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರವಾಗಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಶಂಕಿತರನ್ನು ಖಾಕಿ ಅರೆಸ್ಟ್ ಮಾಡಿದ್ದು, ತನಿಖೆ ಚುರುಕುಗೊಳಿಸಿದೆ..
ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್, ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಶಂಕಿತ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆ ಕೇಸ್ ಸಂಬಂಧ ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ. ಇನ್ನೂ ಬರ್ಬರ ಹತ್ಯೆ ನಡೆಸಿದ್ದ ದುಷ್ಕರ್ಮಿಗಳನ್ನು ಪತ್ತೆಹಚ್ಚಿದ್ದು, ಪ್ರಮುಖ ಆರೋಪಿ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ.