ಬೆಂಗಳೂರು: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆಗೆ ವಹಿಸಬೇಕೆಂದು ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದೆ.
Advertisement
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ.
ಕಳೆದ ಗುರುವಾರ ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.