ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

0
Spread the love

ಮಂಗಳೂರು: ಸುಹಾಸ್​ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಅಜರುದ್ದೀನ್ (29), ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ (24) ಹಾಗೂ ನೌಷಾದ್ (39) ಬಂಧಿತ ಆರೋಪಿಗಳಾಗಿದ್ದು, ಮೂವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದರು.

Advertisement

ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿದ್ದವು. ಈತ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿ, ಕೊಲೆಗೆ ಸಹಕರಿಸಿದ್ದಾನೆ. ಆರೋಪಿಗಳು ಕೊಲೆ ಮಾಡಿದ ನಂತರ ಕಾರಿನಲ್ಲಿ ಪರಾರಿಯಾಗಲು ಆರೋಪಿ ಅಬ್ದುಲ್ ಖಾದರ್ ಸಹಕರಿಸಿದ್ದನು. ಇನ್ನೋರ್ವ ಆರೋಪಿ ನೌಷದ್ ಉಳಿದ ಆರೋಪಿಗಳ ಜೊತೆ ಸೇರಿ ಕೊಲೆಗೆ ಸಂಚು ರೂಪಿಸಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

ಆರೋಪಿ ನೌಷದ್ ವಿರುದ್ಧ ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು.

ಆರೋಪಿಗಳ ಪೈಕಿ ಅಜರುದ್ದೀನ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಬ್ದುಲ್ ಖಾದರ್ ಹಾಗೂ ನೌಷದ್ ಗೆ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಎಂಟು ಜನರ ಬಂಧಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here