ಸುಹಾಸ್ ಶೆಟ್ಟಿ ಅಂತಿಮ ದರ್ಶನ ಪಡೆದ ಬಿವೈ ವಿಜಯೇಂದ್ರ: ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ!

0
Spread the love

ಮಂಗಳೂರು:- ಗುರುವಾರ ರಾತ್ರಿ ಮಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಹೀಡಾಗಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಅವರ ಅಂತಿಮ ದರ್ಶನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಡೆದಿದ್ದಾರೆ. ಅಲ್ಲದೇ ಇದೇ ವೇಳೆ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿ, 25 ಲಕ್ಷ ಪರಿಹಾರ ಘೋಷಿಸಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ವಿಜಯೇಂದ್ರ, ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಪೊಲೀಸ್ ಇಲಾಖೆ ವೈಫಲ್ಯ ಮೇಲ್ನೋಟಕ್ಕೆ ಕಂಡು ಬರ್ತಿದೆ. ಜೀವಕ್ಕೆ ರಕ್ಷಣೆ ನೀಡದಿರುವುದು ಪೊಲೀಸರ ವೈಫಲ್ಯ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ಕುಟುಂಬಕ್ಕೆ ಧೈರ್ಯ ಹೇಳುವ ಪ್ರಯತ್ನ ಮಾಡಿದ್ದೇವೆ. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಅವರ ಕುಟುಂಬದ ಜೊತೆ ಇದ್ದೇವೆ. ಕುಟುಂಬದ ಆಧಾರ ಸ್ತಂಬ ಕಳಚಿ ಬಿದ್ದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಪಕ್ಷದ ಪರವಾಗಿ 25 ಲಕ್ಷ ಪರಿಹಾರ ನೀಡುವ ತೀರ್ಮಾನ ಮಾಡಿದ್ದೇವೆ. ಮುಖ್ಯಮಂತ್ರಿ, ಗೃಹಸಚಿವರು ಘಟನೆಯ ಗಂಭೀರತೆ ಅರ್ಥ ಮಾಡಿಕೊಳ್ಳಬೇಕು. ಸರ್ಕಾರದಿಂದ ಪರಿಹಾರ ನೀಡಬೇಕು ಎಂದರು.


Spread the love

LEAVE A REPLY

Please enter your comment!
Please enter your name here