ಚಿಕ್ಕಮಗಳೂರು:– ವಸತಿ ಶಾಲೆಯ ಹಾಸ್ಟೆಲ್ ನಲ್ಲೇ 15 ವರ್ಷದ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ. 15 ವರ್ಷದ ಶಮಿತಾ ನೇಣಿಗೆ ಶರಣಾದ ವಿದ್ಯಾರ್ಥಿನಿ.
ಶನಿವಾರ ರಾತ್ರಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿ 6ನೇ ತರಗತಿಯಿಂದ ವಸತಿ ಶಾಲೆಯಲ್ಲೇ ಓದುತ್ತಿದ್ದಳು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆ ಬಳಿಕ ಸತ್ಯಾಸತ್ಯತೆ ತಿಳಿದು ಬರಲಿದೆ.



