ಬೆಂಗಳೂರು:- 36 ವರ್ಷದ ಮಹಿಳೆಯೋರ್ವರು ಸರಣಿ ಅಪಘಾತಕ್ಕೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೆಯೋಹಾಲ್ ಜಂಕ್ಷನ್ನಲ್ಲಿ ಜರುಗಿದೆ. 36 ವರ್ಷದ ಅಂಜಲಿ ಮೃತ ಮಹಿಳೆ.
Advertisement
ಜಂಕ್ಷನ್ನಲ್ಲಿ ನಿಂತಿದ್ದ ಕಾರಿಗೆ ಗೂಡ್ಸ್ ವಾಹನ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರು, ಮುಂದೆ ಇದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ನಲ್ಲಿದ್ದ ವಿಜಯ್ ಕುಮಾರ್ ಹಾಗೂ ಅಂಜಲಿ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿ ಅಂಜಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ವಿಜಯ್ ಕುಮಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತಕ್ಕೆ ಕಾರಣನಾಗಿರುವ ಗೂಡ್ಸ್ ವಾಹನದ ಚಾಲಕ ಘಟನೆ ಬಳಿಕ ತಲೆಮರಿಸಿಕೊಂಡಿದ್ದಾನೆ. ಘಟನೆ ಸಂಬಂಧ ಅಶೋಕ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರಿಸಿಕೊಂಡಿರುವ ಗೂಡ್ಸ್ ವಾಹನದ ಚಾಲಕನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.