ಬೆಂಗಳೂರು:- ಕೌಟುಂಬಿಕ ಕಲಹದಿಂದ ಬೇಸತ್ತು ಮಾನಸಿಕವಾಗಿ ನೊಂದಿದ್ದ ಟೆಕ್ಕಿ ಓರ್ವರು ಸೂಸೈಡ್ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ.
ಪ್ರಶಾಂತ್ ನಾಯರ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 12 ವರ್ಷದ ಹಿಂದೆ ಪೂಜಾ ಎಂಬಾಕೆಯನ್ನು ಪ್ರಶಾಂತ್ ಮದುವೆಯಾಗಿದ್ದರು. ಪ್ರಶಾಂತ್ ದಂಪತಿಗೆ 8 ವರ್ಷದ ಮಗಳು ಸಹ ಇದ್ದಾಳೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಪೂಜಾ ನಾಯರ್ ದಂಪತಿ ನಡುವೆ ಸಾಕಷ್ಟು ಭಿನ್ನಾಭಿಪ್ರಾಯವಿತ್ತು. ಬಳಿಕ ಡಿವೋರ್ಸ್ ಕೂಡ ಆಗಿದೆ ಎಂಬ ಮಾಹಿತಿ ಲಭಿಸಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದ ಕಾರಣ ಚಿಕ್ಕಬಾಣಾವರದ ಡಿ.ಎಕ್ಸ್ ಸ್ಮಾರ್ಟ್ ನೆಸ್ಟ್ ಅಪಾರ್ಟ್ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದೆ.
ಹಲವು ಬಾರಿ ಕರೆ ಮಾಡಿದರೂ ಟೆಕ್ಕಿ ಪ್ರಶಾಂತ್ ಕರೆ ಸ್ವೀಕರಿಸಿಲ್ಲ. ಅನುಮಾನಗೊಂಡ ಪ್ರಶಾಂತ್ ತಂದೆ ಮನೆ ಬಳಿ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.