HomeKarnataka NewsSucide Case: ಪಾರ್ಕ್ ನಲ್ಲಿ ನೇಣಿಗೆ ಕೊರಳೊಡ್ಡಿದ ಯುವಕ!

Sucide Case: ಪಾರ್ಕ್ ನಲ್ಲಿ ನೇಣಿಗೆ ಕೊರಳೊಡ್ಡಿದ ಯುವಕ!

For Dai;y Updates Join Our whatsapp Group

Spread the love

ಬೆಂಗಳೂರು:-ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಾಲಿಕೆಯ ಪಾರ್ಕ್ ಒಂದರಲ್ಲಿ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು 19 ವರ್ಷದ ಸುಮಿತ್ ಬಿಕೋ ಅಲಿಯಾಸ್ ತುಷಾಂತ್ ಎಂದು ಗುರುತಿಸಲಾಗಿದೆ.

ತುಷಾಂತ್, ಹೋಟೆಲ್‌ವೊಂದರಲ್ಲಿ ಕೆಲಸ ಮಾಡಿಕೊಂಡು ಪೋಷಕರ ಜೊತೆ ವಾಸವಾಗಿದ್ದ. ತುಷಾಂತ್ ಶುಕ್ರವಾರ ಸಂಜೆ ಹೊತ್ತಿಗೆ ಮನೆಯಲ್ಲಿ ಕಿರಿಕ್ ಮಾಡಿಕೊಂಡು ಮನೆಯಿಂದ ಹೊರಹೋಗಿದ್ದ. ರಾತ್ರಿಯೆಲ್ಲಾ ಮಗ ಮನೆಗೆ ಬಾರದೆಯಿದ್ದ ಕಾರಣ ಪೋಷಕರು ಹುಡುಕಾಟ ನಡೆಸಿದ್ದರು. ಶನಿವಾರ ಬೆಳಗ್ಗೆ ಪಾರ್ಕ್ನಲ್ಲಿ ತುಷಾಂತ್ ನೇಣಿಗೆ ಶರಣಾಗಿರುವ ವಿಚಾರ ಪೋಷಕರಿಗೆ ತಿಳಿದಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಹೆಣ್ಣೂರು ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಆತ್ಮಹತ್ಯೆ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!